- Advertisement -
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ (Coronavirus) ಮಹಾಸ್ಪೋಟವೇ ಉಂಟಾಗಿದೆ. ಇಂದು ಹೊಸದಾಗಿ 2479 ಜನರಿಗೆ ಕೋವಿಡ್ ಪಾಸಿಟಿವ್ (Corona Positive) ಎಂಬುದಾಗಿ ದೃಢಪಟ್ಟಿದೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ (Twitter) ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (Minister Dr K Sudhakar) ಅವರು, ಬೆಂಗಳೂರಿನಲ್ಲಿ 2053 ಸೇರಿದಂತೆ ರಾಜ್ಯಾಧ್ಯಂತ 2479 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.
ಇನ್ನೂ ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ದಿಢೀರ್ ಶೇ.2.59ಕ್ಕೆ ಏರಿಕೆಯಾಗಿದೆ. ಇಂದು ಕೊರೋನಾ ಸೋಂಕಿತರಾದಂತ ನಾಲ್ವರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ 95,391 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ 2479 ಜನರಿಗೆ ಕೋವಿಡ್ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.
- Advertisement -