,
ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಸಂಭದಿಸಿದ0ತೆ ಎಚ್ಚೆತ್ತಿದ್ದು,ಪ್ರಯಾಣಕ್ಕೆ ಮಾರ್ಗಸೂಚಿಯನ್ನು ಹೊರಡಿಸಿದೆ, ಈ ವೇಳೆ ಕೆಎಸ್ಆರ್ಟಿಸಿ (KSRTC) ಬಸ್ಗಳು ಎಂದಿನಂತೆ ಸಂಚರಿಸಲಿವೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ಗಳ (Bus) ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊವಿಡ್ಗೆ (Coronavirus) ಸರ್ಕಾರ ಹೇರಿರುವ ನಿಯಮ ಪಾಲನೆ ಮಾಡಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ರಾಜ್ಯ ಹಾಗೂ ಹೊರ ರಾಜ್ಯದ ನಡುವೆ ಬಸ್ ಸಂಚಾರ ಇರಲಿದೆ. ಗೋವಾ, ಕೇರಳ, ಮಹಾರಾಷ್ಟ್ರ ಹಾಗೂ ತಮಿಳುನಾಡಿನ ಪ್ರಯಾಣಿಕರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ ಎಂದುಕೆಎಸ್ಆರ್ಟಿಸಿ ಎಂಡಿ ಶಿವಯೋಗಿ ಕಳಸದ್ ಮಾಹಿತಿ ನೀಡಿದ್ದಾರೆ.
ಬಿಎಂಟಿಸಿ ಸಂಚಾರಕ್ಕೆ ಬ್ರೇಕ್ :
ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ, ಮತ್ತು ಜನರು ಅನಾವಶ್ಯವಾಗಿ ಓಡಾಡುವುದನ್ನು ತಡೆಯಲು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ,ವೀಕೆಂಡ್ ಕರ್ಫ್ಯೂ ವೇಳೆ ಜನಸಾಮಾನ್ಯರಿಗೆ ಬಿಎಂಟಿಸಿ ಬಸ್ಗಳ ಸಂಚಾರ ಇರುವುದಿಲ್ಲ. ಅಗತ್ಯ ಸೇವೆಗಳಿಗೆ ಮಾತ್ರ ಬಿಎಂಟಿಸಿ ಬಸ್ಗಳು ಸಂಚರಿಸಲಿವೆ. ಶನಿವಾರ, ಭಾನುವಾರ ಪ್ರಯಾಣಕ್ಕೆ ಬಿಎಂಟಿಸಿ ಬಸ್ ಸಿಗುವುದಿಲ್ಲ. ತುರ್ತು, ಅಗತ್ಯ ಸೇವೆಗಳಿಗೆ ಮಾತ್ರ ವಿಶೇಷ ಬಸ್ಗಳ ಸೇವೆ ಇರಲಿದೆ. ಈ ರೀತಿಯಲ್ಲಿ ಸರ್ಕಾರ ಬಸ್ ಸಂಚಾರಕ್ಕೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ.