Metro ಇರಲಿದೆ : 50% ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಹೇರಿದೆ. ಹೀಗಿದ್ದೂ ಮೆಟ್ರೋ ಸಂಚಾರದಲ್ಲಿ ಯಾವುದೇ ಅಡಚಣೆ ಆಗಲ್ಲ. ಎಂದಿನಂತೆ ಮೆಟ್ರೋ ಸೇವೆ ಇರಲಿದೆ ಎಂದು BMRCL ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ.

ಹಸಿರು ಮತ್ತು ನೇರಳೆ ಎರಡು ಮಾರ್ಗದಲ್ಲೂ ಮೆಟ್ರೋ ಸಂಚಾರ ನಡೆಯಲಿದೆ. ಶೇಕಡಾ 50% ರಷ್ಟು ಪ್ರಯಾಣಿಕರಿಗೆ ಮಾತ್ರ ಮೆಟ್ರೋದಲ್ಲಿ ಅವಕಾಶ ಮಾಡಲಾಗುತ್ತಿದೆ. ಸದ್ಯ ಮೆಟ್ರೋ ರೈಲಿನಲ್ಲಿ 1800 ರಿಂದ 1900 ಪ್ರಯಾಣಿಕರು ಸಂಚಾರ ಮಾಡ್ತಿದ್ದಾರೆ.

ಕೋವಿಡ್ ಹೆಚ್ಚಳ ಹಿನ್ನೆಲೆ 800 ರಿಂದ 900 ಪ್ರಯಾಣಿಕರು ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಕೋವಿಡ್ ರೂಲ್ಸ್ ಪ್ರಕಾರವೇ ಮೆಟ್ರೋ ಓಡಿಸಲು ನಿರ್ಧಾರ ಮಾಡಲಾಗಿದೆ. ಮೆಟ್ರೋ ಸಂಚಾರದ ಅವಧಿ ಕಡಿತಗೊಳಿಸಿ ಮೆಟ್ರೋ ಕಾರ್ಯಚರಣೆ ನಡೆಯಲಿದೆ. ಸದ್ಯ ಹತ್ತು ಹದಿನೈದು ನಿಮಿಷಕ್ಕೊಂದು ಮೆಟ್ರೋ ಟ್ರೈನ್ ಕಾರ್ಯಾಚರಣೆ ಆಗಲಿದೆ. ವೀಕೆಂಡ್ ಕರ್ಫ್ಯೂ ವೇಳೆ ಅರ್ಧಗಂಟೆಗೊಂದು ಮೆಟ್ರೋ ಓಡಾಟ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.

About The Author