Saturday, July 5, 2025

Latest Posts

DK Shivakumar ಮತ್ತು ಸಿದ್ಧರಾಮಯ್ಯಗೆ ಟಾಂಗ್ ಕೊಟ್ಟ ಬಿಜೆಪಿ

- Advertisement -

ಬೆಂಗಳೂರು: ಅನಾರೋಗ್ಯದಿಂದಾಗಿ ಮೇಕೆದಾಟು ಪಾದಯಾತ್ರೆಯನ್ನು ಮೊಟಕುಗೊಳಿಸಿ ನಿನ್ನೆ ಬೆಂಗಳೂರಿಗೆ ವಾಪಸ್ಸಾದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಇಂದು ಕೆಣಕಿದೆ.

ನಾವಿಬ್ಬರೇ ನಡೆಯುತ್ತೇವೆ ಎಂದು ಸವಾಲು ಹಾಕಿದ್ದ ಸಿದ್ದರಾಮಯ್ಯ 4 ಕಿ.ಮೀ ನಡೆದು ಸುಸ್ತಾದರೆ ಹೇಗೆ? ಸುಳ್ಳಿನ ಜಾತ್ರೆಯಲ್ಲಿ ಡಿಕೆಶಿ ಅವರಿಗೆ ಅರ್ಧದಲ್ಲೇ ಕೈ ಕೊಟ್ಟಿದ್ದರ ಹಿಂದೆ ಪೂರ್ವ ನಿಯೋಜಿತ ತಂತ್ರವಿದೆಯೇ ? ಎಂದು ಬಿಜೆಪಿ ಸಾಮಾಜಿಕ ಜಾಲತಾಣದ ಮೂಲಕ ಟಾಂಗ್ ಕೊಟ್ಟಿದೆ. ಇನ್ನೂ ಕೋವಿಡ್ ಪರೀಕ್ಷೆಗೆ ನಿರಾಕರಿಸಿರುವ ಡಿಕೆ ಶಿವಕುಮಾರ್ ಅವರ ನಡೆಯನ್ನು ಸಹ ಬಿಜೆಪಿ ಟೀಕಿಸಿದೆ. ಮಾಸ್ಕ್ ಧರಿಸಿದೇ ಪಾದಯಾತ್ರೆ ನಡೆಸಲಾಗಿದೆ. ವಿಪರೀತ ಕೆಮ್ಮಿನ ನಡುವೆಯೂ ಕೋವಿಡ್ ಪರೀಕ್ಷೆ ನಿರಾಕರಿಸಿದ್ದೀರಿ. ನೆಲದ ಕಾನೂನಿನ ಬಗ್ಗೆ ಕಿಂಚಿತ್ ಗೌರವ ಇದೆಯೇ ಎಂದು ಬಿಜೆಪಿ ಟ್ವೀಟರ್ ಖಾತೆಯಲ್ಲಿ ಪ್ರಶ್ನಿಸಲಾಗಿದೆ.

- Advertisement -

Latest Posts

Don't Miss