Karnataka ದಲ್ಲಿ ಕೋವಿಡ್ 19 (corona ) ದಿನದಿಂದ ದಿನಕ್ಕೆ ಹೆಚಾಗುತ್ತಿರುವ ನಿಟ್ಟಿನಲ್ಲಿ ಉಡುಪಿಯ ಪ್ರತಿ ತಾಲೂಕಿನಲ್ಲು ಕೋವಿಡ್ ಕೇರ್ ಸೆಂಟರ್ ಸಿದ್ಧಪಡಿಸಿಕೊಂಡು ಸೋಂಕಿರನ್ನು ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಎಂದು ಇಂಧನ ಹಾಗು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ಕುಮಾರ್ (sunil kumar) ಹೇಳಿದ್ದಾರೆ.
ಕೊರೊನಾ ಉಲ್ಬಣದ ಹಿನ್ನಲೆ ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು ಕಳೆದ 10 ದಿನಗಳಲ್ಲಿ ಜಿಲ್ಲೆಯಲ್ಲಿ 979 ಕೊರೊನಾ ಕೇಸ್‌ಗಳು ಪತ್ತೆಯಾಗಿವೆ. ಈ ಪೈಕಿ 61 ಮಂದಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತು ಪ್ರತಿ ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯುವುದನ್ನು ಹೇಳಿದ್ದು ಸೋಂಕಿತರನ್ನು ಕೇರ್ ಸೆಂಟರ್ ಗೆ ಸ್ಥಳಾಂತರಿಸಲಾಗುವುದು ಮತ್ತು ಸೋಂಕಿತರುಳ್ಳ ಮನೆಗಳನ್ನು ಸೀಲ್‌ಡೌನ್ ಮಾಡಿ ಅಗತ್ಯ ಜನರಿಗೆ ಗ್ರಾಮ ಪಂಚಾಯಿತಿಯಿoದ ಅಗತ್ಯ ಸಾಮಾಗ್ರಿಗಳನ್ನು ಸರಬರಾಜು ಮಾಡಲಾಗುವುದೆಂದು ತಿಳಿಸಿದ್ದಾರೆ.
ಉಡುಪಿಯ ಎಲ್ಲಾ ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರ್ : ಸುನಿಲ್ ಕುಮಾರ್
- Advertisement -
- Advertisement -

