- Advertisement -
ದೆಹಲಿ : ಇನ್ನೂ ದೇಶದಲ್ಲಿ ಕೆಲ ದಿನಗಳಿಂದ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.68.063 ಕೊರೊನಾ ಕೇಸ್ ಪತ್ತೆಯಾಗಿದ್ದು, 277 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ 8,21,446 ಸಕ್ರಿಯ ಪ್ರಕರಣಗಳು ಇವೆ. ಇವರೆಗೆ ದೇಶದಲ್ಲಿ 152 ಕೋಟಿ ಲಸಿಕೆ ಡೋಸ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇದರ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹತ್ವದ ತುರ್ತು ಸಭೆ ಕರೆದಿದ್ದಾರೆ. ಸಂಜೆ 4 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ರಾಜ್ಯಗಳ ಮುಖ್ಯಮಂತ್ತಿಗಳ ಜೊತೆ ತುರ್ತು ಸಭೆ ಕರೆದಿದ್ದಾರೆ. ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮದ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.
- Advertisement -


