Thursday, June 19, 2025

Latest Posts

Karnatakaದಲ್ಲಿ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂವನ್ನು 31ರವರೆಗೆ  ವಿಸ್ತರಣೆ..!

- Advertisement -

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ  ಸಿಎಂ ಬೊಮ್ಮಾಯಿ(CM Bommai)ಅಧಿಕಾರಿಗಳು ಹಾಗೂ ಸಚಿವರ ಜೊತೆ ಮಹತ್ವದ ಸಭೆಯನ್ನು ನಡೆಸಿದರು. ಸಿಎಂ ಬೊಮ್ಮಾಯಿಗೆ ಕೊರೋನಾ ದೃಢಪಟ್ಟಿರುವದರಿಂದ  ವೀಡಿಯೋ ಕಾನ್ಫರೆನ್ಸ್(Video Conference) ಮೂಲಕವೇ ಸಭೆ ನಡೆಸಿದರು. ಇನ್ನು ಬೆಂಗಳೂರಿನಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ಸಿಎಂ  ಕಳವಳ ವ್ಯಕ್ತಪಡಿಸಿದ್ದು, ಬೆಂಗಳೂರಿನಲ್ಲಿ ಮತ್ತಷ್ಟು ಟಫ್ ರೂಲ್ಸ್ (Tough Rules)ಜಾರಿಮಾಡಲು ನಿರ್ಧಾರ ಮಾಡಲಾಯಿತು. ಸದ್ಯ ಈಗಾಗಲೇ ಜಾರಿಯಲ್ಲಿರುವ ನೈಟ್ ಕರ್ಫ್ಯೂ (Night curfew) ಹಾಗೂ ವೀಕೆಂಡ್ ಕರ್ಫ್ಯೂ(Weekend curfew)ವನ್ನು 31ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ.

ಇನ್ನು ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು              

1. ಈಗಾಗಲೇ ಜಾರಿರುವ  ನೈಟ್ ಕರ್ಫ್ಯೂ  ಮತ್ತು ವೀಕೆಂಡ್ ಕರ್ಫ್ಯೂವನ್ನು 31 ರವರೆಗೆ ವಿಸ್ತರಣೆ.                                

2. ಯಾವುದೇ ರೀತಿಯ ಸಾರ್ವಜನಿಕ ಸಮಾವೇಶಗಳು ನಡೆಯುವಂತಿಲ್ಲ.                       

3. ಬಿಬಿಎಂಪಿ ವ್ಯಾಪ್ತಿಯಲ್ಲಿ ಪರೀಕ್ಷಾ ಪ್ರಮಾಣವನ್ನು ದಿನಕ್ಕೆ 1.3 ಲಕ್ಷ ರೂವರೆಗೆ ಹೆಚ್ಚಿಸಲು  ತಿಳಿಸಲಾಗಿದೆ                              

4. ಕೋವಿಡ್ ಲಸಿಕೆಯ 2 ಡೇಸ್ ಪಡೆದು ಒಂಬತ್ತು ತಿಂಗಳು ಪೂರೈಸಿದವರಿಗೆ ಮೂರನೇ ಡೋಸ್ ನೀಡಲು ಆದ್ಯತೆ.                                     

5. ಮುಂಬರುವ ಸಂಕ್ರಾಂತಿ, ವೈಕುಂಠ ಏಕಾದಶಿ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಕಂದಾಯ ಮತ್ತು ಮುಜರಾಯಿ ಇಲಾಖೆಗೆ ಸೂಚಿಸಿದರು.

6. ಶಾಲಾ ಮಕ್ಕಳಲ್ಲಿ ಕೋವಿಡ್ ಹೆಚ್ಚುತ್ತಿರುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪ್ರಕರಣಗಳನ್ನು ಆಧರಿಸಿ ಬಿಇಓ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ವರದಿಯನ್ನು ಆಧರಿಸಿ, ಶಾಲೆಗಳನ್ನು ಮುಚ್ಚುವ ಕುರಿತು ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲು ತೀರ್ಮಾನಿಸಲಾಯಿತು.

7.ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗೆ ಚಿಕಿತ್ಸೆ ನೀಡಲು ಮಕ್ಕಳ ವಾರ್ಡ್, ಐಸಿಯುಗಳನ್ನು ಮೀಸಲಿರಿಸಲು ಸೂಚಿಸಲಾಯಿತು.

8.ಕೋವಿಡ್ ಸೋಂಕಿತ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲು ನಿರ್ಧರಿಸಲಾಯಿತು.

9. ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳು ಜಂಟಿಯಾಗಿ ಎಲ್ಲ ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಮಕ್ಕಳ ಸಾಮಾನ್ಯ ಆರೋಗ್ಯ ತಪಾಸಣೆ ಮಾಡುವಂತೆ ಸೂಚಿಸಲಾಯಿತು.

10.ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ವಿಧಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಯಿತು.

11.ಮೂರನೇ ಅಲೆಯಲ್ಲಿ ಹೋಮ್ ಐಸೋಲೇಷನ್ ನಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ನಿಯಮಿತವಾಗಿ ಮಾಡುವಂತೆ ಹಾಗೂ ಸೂಕ್ತ ಔಷಧಿಗಳ ಕಿಟ್ ಅನ್ನು ಒದಗಿಸುವಂತೆ ಸೂಚಿಸಿದರು.

12. ಪರೀಕ್ಷಾ ವರದಿ ಬಂದ ಕೂಡಲೇ ಸೋಂಕಿತರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಆಸ್ಪತ್ರೆಗೆ ದಾಖಲಿಸುವ ಅಗತ್ಯವಿದೆಯೇ ಇಲ್ಲವೇ ಎಂದು ನಿರ್ಧರಿಸುವ ಟ್ರಯಾಜಿಂಗ್ ವ್ಯವಸ್ಥೆಯನ್ನು ಬಲಪಡಿಸುವಂತೆ ಸೂಚಿಸಿದರು.

13. ಹೋಮ್ ಐಸೊಲೇಷನ್ ಮತ್ತು ಟ್ರಯಾಜಿಂಗ್ ಪ್ರಕ್ರಿಯೆಯಲ್ಲಿ ಹೌಸ್ ಸರ್ಜನ್ ವೈದ್ಯರು ಹಾಗೂ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಯಿತು.
14.ಬೆಂಗಳೂರಿನಲ್ಲಿ ಕೂಡಲೇ 27  ಕೋವಿಡ್ ಕೇರ್ ಸೆಂಟರುಗಳನ್ನು ಪ್ರಾರಂಭಿಸಲು ಸೂಚಿಸಿದರು.
15. ಮುಂಬರುವ ಸಂಕ್ರಾಂತಿ, ವೈಕುಂಠ ಏಕಾದಶಿ ಮತ್ತಿತರ ಹಬ್ಬಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಕಂದಾಯ ಮತ್ತು ಮುಜರಾಯಿ ಇಲಾಖೆಗೆ ಸೂಚಿಸಿದರು.
16.ಮಾರುಕಟ್ಟೆ ಪ್ರದೇಶದಲ್ಲಿ ಜನದಟ್ಟಣೆ ಕಡಿಮೆಗೊಳಿಸಲು ವಸ್ತುಸ್ಥಿತಿ ಆಧರಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
17.ರಾಜ್ಯದಲ್ಲಿ ಯಾವುದೇ ರೀತಿಯ ಸಿದ್ಧತೆಯಲ್ಲಿ ಲೋಪವಾಗದಂತೆ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಸಭೆಯ ಮುಕ್ತಾಯದ ಬಳಿಕ ಮಾಧ್ಯಮಗಳಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ, ಮಾಹಿತಿ ನೀಡಿದರು
ಸಭೆಯಲ್ಲಿ ಸಚಿವರಾದ ಡಾ.ಕೆ. ಸುಧಾಕರ್, ಬಿ.ಸಿ. ನಾಗೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್ ಮತ್ತು ಇತರ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest Posts

Don't Miss