Saturday, June 21, 2025

Latest Posts

Ashwath narayan : ಫ್ಯೂಚರ್ ಡಿಜಿಟಲ್ ಜಾಬ್ಸ್ ಗೆ ಚಾಲನೆ

- Advertisement -

ಬೆಂಗಳೂರು : ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸಿಕೊಡುವ ಮಹತ್ವಾಕಾಂಕ್ಷೆಯುಳ್ಳ `ಪ್ಯೂಚರ್ ಡಿಜಿಟಲ್ ಜಾಬ್ಸ್’ (Future Digital Jobs) ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ (Dr CN Ashwathnarayan) ಅವರು ಇಂದು ಚಾಲನೆ ನೀಡಿದರು. ಇದರ ಅಂಗವಾಗಿ ರಾಜ್ಯ ಕಾಲೇಜು ಮತ್ತು ತಾಂತ್ತಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಸಂಸ್ಥೆಗಳು ಸಹಿ ಹಾಕಿದವು.

ಈ ಕಾರ್ಯಕ್ರಮದಿಂದ ರಾಜ್ಯದ 92 ಸರ್ಕಾರಿ ಪಾಲಿಟೆಕ್ನಿಕ್ ಮತ್ತು 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಅವರ ಕನಸಿನ ಉದ್ಯೋಗ ಸಿಗಲಿದೆ. ಇದು ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿದೆ. ಕಾಲೇಜುಗಳಲ್ಲಿ ಫ್ಯೂಚರ್ ಡಿಜಿಟಲ್ ಜಾಬ್ಸ್ ಯೋಜನೆ ಒಂದು ವಿಶೇಷ ಆಂದೋಲದಂತೆ ಹಮ್ಮಿಕೊಳ್ಳಲಾಗುವುದು. ಜೊತೆಗೆ ಇಂಟರ್ನ್ ಶಿಫ್, ಪ್ರಾಜೆಕ್ಟ್ಸಗಳು ಮತ್ತು ಉದ್ಯೇಗ ನೇಮಕಾತಿಯ ಕನಸು ನನಸಾಗುವಂತೆ ಮಾರ್ಗದರ್ಶನ ನೀಡಲಾಗುವುದು ಎಂದು ಹೇಳಿದರು.

ಸರ್ಕಾರಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಉದ್ಯೇಗಗಳ ಕುರಿತು ಸಂಶೋಧನೆ ನಡೆಸಲು ಅನುವು ಮಾಡಿಕೊಡಲಾಗಿದೆ. ಉದ್ಯಮಗಳ ಮಾಹಿತಿ, ಮಾರ್ಗದರ್ಶನ ನೀಡಲಿದ್ದು, ನಿಯಮಿತವಾಗಿ ಸಂಕಿರಣಗಳನ್ನು ಕೂಡ ಆಯೋಜಿಸಲಾಗುತ್ತದೆ. ಇದರಿಂದ ಹೆಚ್ಚಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಲಾಭವಾಗಲಿದೆ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ರವರು ಹೇಳಿದರು.

- Advertisement -

Latest Posts

Don't Miss