- Advertisement -
ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ರಾಜಕೀಯ ಜಂಜಾಟ ಶುರುವಾಗಿದೆ. ಪ್ರಭಾವಿ ಒಬಿಸಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರ ರಾಜಿನಾಮೆ ಬಳಿಕ ಉತ್ತರಪ್ರದೇಶ ಬಿಜೆಪಿಯಲ್ಲಿ ರಾಜಿನಾಮೆ ಅಲೆ ಶುರುವಾಗಿದೆ. ನಂತರ ಧರಂ ಸಿಂಗ್ ಚೌಹಾಣ್ ರಾಜಿನಾಮೆಯನ್ನು ನೀಡಿದರು. ಪ್ರಮುಖವಾಗಿ ಗಮನಿಸುವ ಅಂಶವೆoದರೆ ಎಲ್ಲಾ ಸಚಿವರು ಮತ್ತು ಶಾಸಕರು ಒಂದೇ ರೀತಿಯ ರಾಜಿನಾಮೆ ಪತ್ರ ಬರೆದಿದ್ದಾರೆ. ಬಿಜೆಪಿ ದಿಲಿತರು ಮತ್ತು ಹಿಂದುಳಿದ ವರ್ಗದವರನ್ನು ನಿರ್ಲಕ್ಷಿಸಿದ್ದಾರೆ .
ಜೊತೆಗೆ ಕಳೆದ ಐದು ವರ್ಷಗಳಲ್ಲಿ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನಾಯಕರ ಬಗ್ಗೆ ಸರ್ಕಾರ ಗಮನ ಹರಿಸಿಲ್ಲ ಎಂದು ನಿಶಾದ್ ಸಮುದಾಯದ ಮುಖೇಶ್ ವರ್ಮಾ ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.
- Advertisement -