Tennis ತಾರೆ ಸಾನಿಯಾ ಮಿರ್ಜಾ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಣೆ..!

ಕ್ರೀಡೆ : ಟೆನಿಸ್(Tennis)ನ ತಾರೆ ಸಾನಿಯಾ ಮಿರ್ಜಾ(Sania Mirza) ಟೆನಿಸ್ ವೃತ್ತಿ ಜೀವನಕ್ಕೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಆಸ್ಟ್ರೇಲಿಯನ್ ಓಪನ್ ನಲ್ಲಿ ಮಹಿಳೆಯರ ಡಬಲ್ಸ್ ನಲ್ಲಿ ಮೊದಲ ಸುತ್ತಿನಲ್ಲಿ ಸೋಲು ಕಂಡ ನಂತರ ಸಾನಿಯಾ ಮಿರ್ಜಾ ನಿವೃತ್ತಿ ಘೋಷಣೆ ಮಾಡಿದ್ದು, ಇದು ನನ್ನ ಕೊನೆಯ ಸೀಸನ್ ಆಗಲಿದೆ ಎಂದು ಹೇಳಿದ್ದಾರೆ. ನನಗೆ ಇನ್ನು ಮುಂದೆ ಹಾಡುವುದು ಸರಳವಾಗಿಲ್ಲ, ನಾನು ಚೇತರಿಸಿಕೊಳ್ಳಲು ತುಂಬಾ ಸಮಯ ಬೇಕಾಗುತ್ತದೆ, ನನ್ನ ದೇಹವು ಸಹ ಕ್ಷೀಣಿಸುತ್ತಿದೆ ಎಂದು ನಾನು ಭಾವಿಸುತ್ತಿದ್ದೇನೆ, ಇಂದು ನನ್ನ ಮೊಣಕಾಲು ನಿಜವಾಗಿಯೂ ನೋಯುತ್ತಿದೆ. ನಾನು ನನ್ನ ಮೂರುವರ್ಷದ ಮಗನ ಜೊತೆ ಸಮಯ ಕಲಿಯಬೇಕಿದೆ ಎಂದು ಹೇಳಿದ್ದಾರೆ. ಇನ್ನು ನಮ್ಮ ಭಾರತ ಟೆನಿಸ್ ತಾರೆ ಈಗಾಗಲೇ 6 ಗ್ರಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದಿದ್ದು , 2009ರಲ್ಲಿ ಮೊದಲ ಬಾರಿಗೆ ಗ್ರಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದು ಅದೆಷ್ಟು ಜನರಿಗೆ ಸ್ಫೂರ್ತಿಯಾಗಿದ್ದು, ತಾಯಿಯಾದ ನಂತರವೂ ವೃತ್ತಿಜೀವನದಲ್ಲಿ ಎಲ್ಲರ ಗಮನವನ್ನು ಸಹ ಸೆಳೆದಿದ್ದರು.


About The Author