ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 3,37,704 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಿನದ ಪಾಸಿಟಿವಿಟಿ ರೇಟ್ ಶೇ.17.22ಕ್ಕೆ ಏರಿಕೆಯಾಗಿದೆ
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಕುಸಿತವಾಗಿದ್ದು, 24 ಗಂಟೆಯಲ್ಲಿ 488 ಜನ ಮಹಾಮಾರಿಗೆ ಬಲಿಯಾಗಿದ್ದಾರೆ
ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 488884ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 2113365 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 242676 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 36301482 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ 67,49,746 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,61,16,60,078 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 19,60,954 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.