mekedatu ಜಲ ವಿವಾದ ಫೆ.14 ಸುಪ್ರೀಂ ಕೋರ್ಟ್ ವಿಚಾರಣೆ

ಬೆಂಗಳೂರು: ಅಂತಾರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದಂತೆ ರಾಜ್ಯದ ಮುಂದಿನ ನಡೆ ಕುರಿತು ಫೆಬ್ರವರಿ ಮೊದಲ ವಾರ ಸರ್ವಪಕ್ಷಗಳ ಸಭೆ ಕರೆಯಲು ತೀರ್ಮಾನಿಸಿರುವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಕಾನೂನು, ತಾಂತ್ರಿಕ ಪರಿಣತರು ಹಾಗೂ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೃಷ್ಣಾ, ಕಾವೇರಿ, ಮಹದಾಯಿ ಜಲ ವಿವಾದಗಳು ಸುಪ್ರೀಂ ಕೋರ್ಟ್​​ನಲ್ಲಿ ವಿಚಾರಣಾ ಹಂತದಲ್ಲಿವೆ.
ಮೇಕೆದಾಟು ವ್ಯಾಜ್ಯವು ಫೆ.14ಕ್ಕೆ ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆಗೆ ಬರಲಿದ್ದು, ಅಷ್ಟರೊಳಗೆ ಮತ್ತೊಂದು ಸಭೆ ನಡೆಸಲಾಗುವುದು ಎಂದು ತಿಳಿಸಿದರು.

About The Author