Thursday, August 21, 2025

Latest Posts

Twitt ಮಾಡಿದ ಕುಮಾರಸ್ವಾಮಿ ವಿರುದ್ಧ ಸಿದ್ದು ವಾಗ್ದಾಳಿ …!

- Advertisement -

ಬೆಂಗಳೂರುತಮ್ಮನ್ನು ವಿಷಸರ್ಪಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ, ಸೋಲು ಗೆಲುವು ನಿರ್ಧಾರ ಮಾಡುವುದು ಮತದಾರ.

ಜನರ ತೀರ್ಪನ್ನು ಸ್ವೀಕಾರ ಮಾಡಲೇಬೇಕು ಎಂದರು. ಇನ್ನು ಕುಮಾರಸ್ವಾಮಿ ಅವರ ಭಾಷೆ ಅವರ ಸಂಸ್ಕೃತಿ ತೋರಿಸುತ್ತದೆ. ಚುನಾವಣೆ ನಾನು ಸೋತ್ತಿದ್ದೇನೆ. ಯಾಕೆ ಕುಮಾರಸ್ವಾಮಿ ಸೋತಿಲ್ವಾ, ಅವರಪ್ಪ ಸೋತಿಲ್ಲಾ, ಮಗ ಸೋತಿಲ್ವಾ ಎಂದು ತಿರುಗೇಟು ನೀಡಿದರು.

ಜೆಡಿಎಸ್ ಪಕ್ಷವು ಬಿಜೆಪಿಯ ಬಾಲಂಗೋಚಿ, ತುಮಕೂರಿನಿಂದ ಜೆಡಿಎಸ್‌ ಅನ್ನು ಓಡಿಸಿ, ಆ ಪಕ್ಷಕ್ಕೆ ಸಿದ್ದಾಂತವಿಲ್ಲ ಎಂದು ಹೇಳಿಕೆ ನೀಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಟೀಕಾ ಪ್ರಹಾರ ನಡೆಸಿದ್ದರು.

ಇಂದು ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಜೆಡಿಎಸ್‌ ಪಕ್ಷವನ್ನು ತುಮಕೂರಿನಿಂದ ಓಡಿಸುವುದಿರಲಿ, ನಿಮ್ಮನ್ನೇ ಚಾಮುಂಡೇಶ್ವರಿ ಕ್ಷೇತ್ರದಿಂದ ಓಡಿಸಿದ್ದಾರೆ. ಇನ್ನು ಬಾದಾಮಿ ಕ್ಷೇತ್ರದಿಂದ ಓಡಿಸುವುದು ಬಾಕಿ ಇದೆ ಎಂದು ಸಿದ್ದರಾಮಯ್ಯ ಅವರಿಗೆ ನೇರವಾಗಿ ಟಾಂಗ್‌ ನೀಡಿದ್ದರು.

- Advertisement -

Latest Posts

Don't Miss