Tuesday, November 18, 2025

Latest Posts

Congress ಪಕ್ಷದ ಹಿರಿಯ ಮುಖಂಡ ಆರ್ ಪಿ ಎನ್ ಸಿಂಗ್ ಬಿಜೆಪಿಗೆ ಸೇರ್ಪಡೆ..!

- Advertisement -

ಕಾಂಗ್ರೆಸ್(congress) ಪಕ್ಷದ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆರ್ ಪಿ ಎನ್ ಸಿಂಗ್(RPN Singh) ರವರು ಬಿಜೆಪಿಗೆ(bjp) ಸೇರ್ಪಡೆಯಾಗಿದ್ದಾರೆ. ನಾನು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ದೇಶದ ಅಭಿವೃದ್ಧಿಗೋಸ್ಕರ. ಪ್ರಧಾನಮಂತ್ರಿ ನರೇಂದ್ರ ಮೋದಿ(pm modi)ಯವರ ಕನಸು ಈಡೇರಿಸುವುದಕ್ಕಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ, ಹಾಗೂ ಗೃಹ ಮಂತ್ರಿ ಅಮಿತ್ ಶಾ(Amit Shah) ಅವರ ನಾಯಕತ್ವದ ಮಾರ್ಗದರ್ಶನದಲ್ಲಿ ರಾಷ್ಟ್ರದ ಅಭಿವೃದ್ಧಿಯ ದೃಷ್ಟಿಯಲ್ಲಿ ನಾನು ಸಹ ಸೇವೆಯನ್ನು ಮಾಡಲು ಬಿಜೆಪಿ ಪಕ್ಷ ಸೇರುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ನ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಅವರಿಗೆ ಪತ್ರದ ಮೂಲಕ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ರಾಷ್ಟ್ರದ ಜನತೆ ಮತ್ತು ಪಕ್ಷಕ್ಕೆ ಸೇವೆಸಲ್ಲಿಸಲು ನನಗೆ ಅವಕಾಶ ಕಲ್ಪಿಸಿದಕ್ಕಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ. ನಾವು ಗಣರಾಜ್ಯೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ, ನನ್ನ ರಾಜಕೀಯ ಪ್ರಯಾಣದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇನೆ, ಜೈ ಹಿಂದ್ ಎಂದು ಟ್ವೀಟ್ ಮಾಡಿದ್ದಾರೆ.

- Advertisement -

Latest Posts

Don't Miss