- Advertisement -
73 ನೇ ಗಣರಾಜ್ಯೋತ್ಸವ(Republic Day) ಕಾರ್ಯಕ್ರಮದ ಅಂಗವಾಗಿ ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣ(General Thimayya District Ground)ದಲ್ಲಿ ಕೊಡಗು ಜಿಲ್ಲೆ ಉಸ್ತುವಾರಿ ಸಚಿವ ಬಿ ಸಿ ನಾಗೇಶ್(Minister BC Nagesh) ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ನನಗೆ ಕೊಡಗು ಜಿಲ್ಲೆಯ ಉಸ್ತುವಾರಿ ನೀಡಿದ್ದು ಯಾವುದೇ ರೀತಿಯಲ್ಲಿ ಸಮಾಧಾನ ತಂದಿಲ್ಲ, ನನ್ನನ್ನು ಕೊಡಗು(Kodagu) ಜಿಲ್ಲೆಯ ಉಸ್ತುವಾರಿಯನ್ನಾಗಿ ಮಾಡಿದ್ದಕ್ಕೆ ಖುಷಿಯಾಗಿದೆ ಎಂದು ಹೇಳಿದ್ದಾರೆ. ಇನ್ನು ರಾಜ್ಯದಲ್ಲಿ ಕೊರೋನಾ ಕಾರಣದಿಂದ ಶಾಲೆಗಳನ್ನು ಮುಚ್ಚಲಾಗಿದೆ, ಮುಂದಿನವಾರದಿಂದ ಶಾಲೆಗಳನ್ನು ತೆರೆಯಲಾಗುವುದು, 29ನೇ ತಾರೀಕು ನಡೆಯುವ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ನಂತರ ಮಡಿಕೇರಿ(Madikeri)ತಾಲೂಕಿನ ಮೂರ್ನಾಡು ಗ್ರಾಮದಲ್ಲಿ ಗ್ರಾಮವನ್ನು ಕೇಂದ್ರಕ್ಕೆ ಚಾಲನೆ ನೀಡಿದರು.
- Advertisement -