Thursday, February 6, 2025

Latest Posts

Jawahar ನವೋದಯ ಶಾಲೆಯ 68 ವಿದ್ಯಾರ್ಥಿಗಳು, 7 ಜನ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆ

- Advertisement -

ಯಾದಗಿರಿ : ಕೊರೊನಾ ಆತಂಕದ ಮಧ್ಯೆಯೇ ಸರ್ಕಾರವು ಕಠಿಣ ನಿಯಮಗಳನ್ನು ಸಡಿಲಿಕೆ ಮಾಡಿ ಶಾಲೆಗಳನ್ನು ಆರಂಭಿಸಿದೆ. ಆದರೆ, ಇಂದಿಗೂ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗುತ್ತಿದೆ.

ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಹೋತಪೇಟ ಎಂಬಲ್ಲಿನ ಜವಾಹರ ನವೋದಯ ಶಾಲೆಯ 7 ಜನ ಸಿಬ್ಬಂದಿ ಸೇರಿದಂತೆ 68 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ.

ಈ ಶಾಲೆಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿನ ಸುಮಾರು 35 ಜನ ಸಿಬ್ಬಂದಿ ಹಾಗೂ 528 ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ 7 ಜನ ಸಿಬ್ಬಂದಿ ಹಾಗೂ 68 ಜನ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ.

ಸೋಂಕಿತ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯಲ್ಲಿ ಸೋಂಕಿನ ಗಂಭೀರತೆ ಕಂಡು ಬಂದಿಲ್ಲ. ಸೌಮ್ಯ ಲಕ್ಷಣಗಳು ಕಂಡು ಬಂದಿದ್ದು, ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೇ, ಈ ಶಾಲೆಗೆ ಒಂದು ವಾರ ರಜೆ ಘೋಷಿಸಲಾಗಿದೆ. ಹಲವು ವಿದ್ಯಾರ್ಥಿಗಳು ಪಾಲಕರೊಂದಿಗೆ ಮನೆಗೆ ತೆರಳಿ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯ ಆರ್. ಅವರು ವೈದ್ಯಾಧಿಕಾರಿಗಳೊಂದಿಗೆ ಶಾಲೆಗೆ ಆಗಮಿಸಿ, ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ, ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ.

- Advertisement -

Latest Posts

Don't Miss