Tuesday, December 24, 2024

Latest Posts

Ramesh Jarkiholi ಸಿಡಿ ಪ್ರಕರಣ ಸಂಬಂಧಿಸಿದಂತೆ ಅಂತಿಮ ವರದಿ ಸಲ್ಲಿಸಲು ಹೈಕೋರ್ಟ್ ಅನುಮತಿ..!

- Advertisement -

ಬೆಂಗಳೂರು : ರಮೇಶ್ ಜಾರಕಿಹೊಳಿ (Ramesh Jarkiholi) ಸಿಡಿ ಪ್ರಕರಣಕ್ಕೆ (case of CD) ಸಂಬಂಧಿಸಿದಂತೆ  ಅಂತಿಮವಾಗಿ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠವು (High Court Divisional Bench) ಅನುಮತಿ ನೀಡಿದೆ. ಅಂತಿಮ ವರದಿ ಸಲ್ಲಿಸಲು ಎಸ್ಐಟಿ (STI) ಅವಕಾಶ ಕೋರಿತ್ತು. ಎಸ್ಐಟಿ ತನಿಖೆಯನ್ನು ಪ್ರಶ್ನಿಸಿರುವ  ಯುವತಿಯ ಅರ್ಜಿಯ ಬಗ್ಗೆ ಕೋರ್ಟ್ ಇಂದು ವಿಚಾರಣೆ ನಡೆಸಿದ್ದು, ತನಿಖಾ ವರದಿ ಸಲ್ಲಿಸಲು ಯಾವುದೇ ರೀತಿಯ ಆಕ್ಷೇಪಣೆ ಇಲ್ಲ ಎಂದು ಹೇಳಿದ್ದಾರೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ  ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಈ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ವರದಿ ಸಲ್ಲಿಕೆಯಾಗಲಿದೆ. ಪೊಲೀಸರ ಅಂತಿಮ ವರದಿಯಲ್ಲಿ ರಮೇಶ್ ಜಾರಕಿಹೊಳಿ ಭವಿಷ್ಯ ಇದೆ. ಯುವತಿಯ ಆರೋಪ ಸಾಬೀತಾಗದಿದ್ದರೆ ಬಿ ರಿಪೋರ್ಟ್ (B. Report) ಸಲ್ಲಿಕೆಯಾಗುತ್ತದೆ. ಸಿ ರಿಪೋರ್ಟ್ (C. Report) ಸಲ್ಲಿಸಿದರೆ ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗುತ್ತಾರೆ. ಚಾರ್ಜ್‌ಶೀಟ್ ಸಲ್ಲಿಸಿದರೆ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಲಿದೆ. ಹೀಗಾಗಿ ಸದ್ಯಕ್ಕೆ ಅಂತಿಮ ವರದಿಯು ರಮೇಶ್ ಭವಿಷ್ಯವನ್ನು ತೀರ್ಮಾನಿಸುತ್ತದೆ. ಹೀಗಾಗಿ ಅಂತಿಮ ವರದಿ ಸಲ್ಲಿಕೆಗೆ ಅನುಮತಿ ಕೋಡುತ್ತಿದ್ದೇವೆ ಎಂದು ಎಸ್ಐಟಿ ಪರ ಅಶೋಕ್ ಹಾರನಹಳ್ಳಿ (SIT pro Ashok Haranahalli) ವಾದ ಮಂಡಿಸಿದರು. ಅಂತಿಮವರದಿ ಸಲ್ಲಿಸಬಾರದು, ಆರೋಪಿ ಮಾಜಿ ಸಚಿವರಿಗೆ ನೆರವು ನೀಡಲು ಸರ್ಕಾರದ ಬದಲು ಪೊಲೀಸ್ ಆಯುಕ್ತರು ಎಸ್ಐಟಿ ರಚಿಸಿದ್ದಾರೆ. ಪೊಲೀಸ್ ಆಯುಕ್ತರಿಗೆ ಎಸ್ಐಟಿ ರಚಿಸುವ ಅಧಿಕಾರವಿಲ್ಲ. ಹೀಗಾಗಿ ಈ ಎಸ್ಐಟಿ ಅಂತಿಮ ವರದಿ ಸಲ್ಲಿಸಬಾರದು ಎಂದು ಯುವತಿ ಪರ ಹಿರಿಯ ವಕೀಲರು ವಾದ ಮಂಡಿಸಿದ್ದಾರೆ.

- Advertisement -

Latest Posts

Don't Miss