Monday, December 23, 2024

Latest Posts

Hijab Controversy ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆ..!

- Advertisement -

ಬೆಂಗಳೂರು : ಹಿಜಬ್ ವಿವಾದ(Hijab Controversy)ಕ್ಕೆ ಸಂಬಂಧಿಸಿದಂತೆ ಗೃಹಸಚಿವ ಆರಗ ಜ್ಞಾನೇಂದ್ರ (Home Minister Araga Gnanendra) ಇಂದು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ (educational institutions) ನಿಗದಿಪಡಿಸಿರುವ ಸಮವಸ್ತ್ರ ವರುತು ಪಡಿಸಿ, ವಿದ್ಯಾರ್ಥಿಗಳು ಕೇಸರಿ ಶಾಲು (Saffron shawl), ಹಿಜಾಬ್ ಧರಿಸಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಕಡ್ಡಾಯ ಹೊರತು ಬೇರೇನೂ ಅಲ್ಲ ಎಂದು ಹೇಳಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಧರ್ಮ, ಜಾತಿಯನ್ನು ಮೀರಿ ಎಲ್ಲರೂ ಒಂದೇ ಎಂಬ ಭಾವನೆ ಹಾಗೂ ಭಾರತ ಮಾತೆಯ ಮಕ್ಕಳು ಎಂಬ ರಾಷ್ಟ್ರಪ್ರೇಮ ಇರಬೇಕು. ಧಾರ್ಮಿಕ ಕಾರ್ಯಗಳು ದೇವಾಲಯ, ಮಸೀದಿಗಳಲ್ಲಿ ಇರಲಿ, ಶಾಲೆಗಳಲ್ಲಿ ಏಕತೆ ಹಾಗೂ ಸಮಗ್ರತೆಯ ಬಗ್ಗೆ ಸಂಸ್ಕಾರ ಇರಬೇಕು ಎಂದು ತಿಳಿಸಿದ್ದಾರೆ. ಮತೀಯ ಸಂಘಟನೆಗಳ ಬಗ್ಗೆ ಗಮನ ಹರಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ಯಾರು ಏಕತೆಗೆ ಅಡ್ಡಗಾಲು ಹಾಕುತ್ತಾರೋ ಅವರನ್ನು ಸರಿಮಾಡಲಾಗುವ ಕೆಲಸ ಮಾಡಲಾಗುತ್ತದೆ ಎಂದು ಸಚಿವರು ಎಚ್ಚರಿಸಿದರು. ಇದಕ್ಕೂ ಮುನ್ನ ವಿಪತ್ತು ಸ್ಪಂದನಾ ಪಡೆಯ ಆಂಬ್ಯುಲೆನ್ಸ್ (Disaster Response Force Ambulance), ಜೀಪು, ಸರಕು ಸಾಗಾಣಿಕೆಯ ವಾಹನ, ಜನರೇಟರ್ ಒಳಗೊಂಡ ಟ್ರಕ್ ವಾಹನಗಳಿಗೆ ಗೃಹ ಸಚಿವರು ಚಾಲನೆ ನೀಡಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ (Subhas Chandra Bose) ಅವರ ಹೆಸರಿನಲ್ಲಿ ವಿಪತ್ತು ಸ್ಪಂದನಾ ಪಡೆಯ ತರಬೇತಿ ಸಂಸ್ಥೆಯೊಂದನ್ನು ಸ್ಥಾಪಿಸಲಾಗುವುದು. ರಾಜ್ಯ ವಿಪತ್ತು ಸ್ಪಂದನಾ ಪಡೆಯ ಕೇಂದ್ರೀಯ ತರಬೇತಿ ಅಕಾಡೆಮಿ (Central Training Academy)ಯನ್ನು ದೊಡ್ಡಬಳ್ಳಾಪುರ(Doddaballapura)ದಲ್ಲಿರುವ ಅಗ್ನಿಶಾಮಕ ಪಡೆಯ 20 ಎಕರೆ ಜಾಗದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ” ಎಂದರು. ನೇತಾಜಿ ಅವರ 125ನೇ ಜಯಂತಿ ಸಂದರ್ಭದಲ್ಲಿ ಮುಂದಿನ ತಲೆಮಾರಿಗೆ ಅವರ ಆದರ್ಶಗಳನ್ನು ನೆನಪಿಸುವಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಅತಿವೃಷ್ಟಿ, ಅನಾವೃಷ್ಟಿ, ಪ್ರಾಕೃತಿಕ ಹಾಗೂ ಮಾನವ ನಿರ್ಮಿತ ಅವಘಡ ನಿರ್ವಹಿಸಲು ವಿಶೇಷ ಕಾರ್ಯಪಡೆಯ ಅಗತ್ಯವಿದೆ. ಸಿಬ್ಬಂದಿ ಕೊರತೆ ನೀಗಿಸಲು ನಿಯೋಜನೆ ಮೇಲೆ ಸಿಬ್ಬಂದಿ ಒದಗಿಸಲು ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು” ಎಂದು ಆರಗ ಜ್ಞಾನೇಂದ್ರ ಭರವಸೆ ನೀಡಿದರು.

- Advertisement -

Latest Posts

Don't Miss