Wednesday, October 15, 2025

Latest Posts

MB Patil : ಹಿಜಾಬ್ ವಿವಾದ ಪ್ರಾರಂಭ ಮಾಡಿದ್ದು ಬಿಜೆಪಿ ಸರ್ಕಾರ..!

- Advertisement -

ರಾಜಕೀಯ ಉದ್ದೇಶಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಹಿಜಾಬ್ ವಿವಾದ (Hijab Controversy) ಪ್ರಾರಂಭ ಮಾಡಿದೆ ಎಂದು ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ (MB Patil) ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆ ಎಂಬುದು ಒಂದು ವರ್ಷ ಮಾತ್ರ ಬಾಕಿ ಇದೆ. ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು, ಮಕ್ಕಳಲ್ಲಿ ವಿಷಬೀಜ ಬಿತ್ತುತ್ತಿದೆ ಎಂದು ಬಿಜೆಪಿಯ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ರಾಜಕೀಯ ಹಸ್ತಕ್ಷೇಪ, ವಿಷ ಬೀಜ ಬಿತ್ತಬಾರದು. ಇದೆಲ್ಲಾ ಆರಂಭವಾಗಿದ್ದೇ ಬಿಜೆಪಿಯಿಂದ. ನಾರಾಯಣ ಗುರುಗಳ ಸ್ತಬ್ಧಚಿತ್ರ ಪ್ರಕರಣದಿಂದ ಎದ್ದಿದ್ದ ಹೋರಾಟದ ಹಾದಿ ತಪ್ಪಿಸುವ ಪ್ರಯತ್ನಕ್ಕೆ ಮತ್ತೊಂದು ವಿವಾದವನ್ನು ಹುಟ್ಟುಹಾಕಲಾಗಿದೆ ಅಂತಾ ಪಾಟೀಲ್ ಹೇಳಿದ್ದಾರೆ.

- Advertisement -

Latest Posts

Don't Miss