Chennaveera kanaviಯವರ ಆರೋಗ್ಯದ ಸ್ಥಿತಿ ಗಂಭೀರ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ..!

ನಾಡೋಜ ಚೆನ್ನವೀರ ಕಣವಿ(chennaveera kanavi) ಯವರ  ಆರೋಗ್ಯದ ಸ್ಥಿತಿ ಗಂಭೀರವಾಗದೆ . 93 ವರ್ಷದ ನಾಡೋಜ ಚೆನ್ನವೀರ ಕಣವಿ ಕಳೆದ 3-4 ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡದ SDM ಆಸ್ಪತ್ರೆಯ (SDM Hospital) ವೆಂಟಿಲೇಟರ್ನಲ್ಲಿ ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೊದಲು, ಉಸಿರಾಟ ಸಮಸ್ಯೆಯಿಂದ (breathing problem) ಆಸ್ಪತ್ರೆ ಸೇರಿದ್ದ ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ, ಈಗ ಮತ್ತೆ ಆರೋಗ್ಯ ಕ್ಷೀಣಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಕೂಡ ಚೆನ್ನವೀರ ಕಣವಿ ಆರೋಗ್ಯ ವಿಚಾರಿಸಿ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಕೂಡ ಮಾಡಿದ್ದಾರೆ.

About The Author