ಚಾಮರಾಜನಗರ : ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ ತಾಲೂಕು (Challakere Taluk) ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಸಂಘ ಚಾಮರಾಜನಗರ (Chamaraja nagara) ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಸಮಾವೇಶಗೊಂಡ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ಪಂಚಾಯತ್ ಇಓ ಮಡಗಿನ ಬಸಪ್ಪ ಅವರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಚಾಮರಾಜನಗರ ಜಿಲ್ಲಾ ಅಧ್ಯಕ್ಷ ಕುಮಾರ ಸ್ವಾಮಿ (Chamarajanagar District President Kumara Swamy) ಮಾತನಾಡಿ ಕೆಡಿಪಿ ಸಭೆಯನ್ನ ಕರೆದಿಲ್ಲ ಎಂಬ ನೆಪಕ್ಕೆ ದೈಹಿಕವಾಗಿ ಹಲ್ಲೆ ನಡೆಸಿರುವುದು ಅಕ್ಷಮ್ಯ, ಈ ಹಿನ್ನೆಲೆಯಲ್ಲಿ ಆರೋಪಿತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಜೊತೆ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.