Wednesday, October 15, 2025

Latest Posts

‘Kanneri’ ಸಿನಿಮಾಗೆ ಸಾಥ್ ಕೊಟ್ಟ ವಸಿಷ್ಠ ಸಿಂಹ‌… ಕಾಣದ ಊರಿಗೆ ಸಾಂಗ್ ರಿಲೀಸ್..!

- Advertisement -

ಕನ್ನಡ ಚಿತ್ರರಂಗದಲ್ಲಿ  ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ ನೈಜ ಘಟನೆ ಆಧಾರಿತ ಮಹಿಳಾ ಪ್ರಧಾನ ಸಿನಿಮಾ ‘ಕನ್ನೇರಿ’ (Kanneri). ಈಗಾಗಲೇ ಕನ್ನೇರಿ ಸಿನಿಮಾದ ಕೆಲ ಹಾಡುಗಳು ಕೇಳುಗರ ಮನ ಮುಟ್ಟಿದ್ದು, ಈಗ ಕಾಣದ ಊರಿಗೆ ಎಂಬ ಹಾಡನ್ನು ಕಂಚಿನ ಕಂಠದ ಗಾಯಕ ವಸಿಷ್ಠ ಸಿಂಹ (Vasishta Simha) ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಹಾರೈಸಿದ್ದಾರೆ. ಕೋಟಿಗಾನಹಳ್ಳಿ ರಾಮಯ್ಯ (Kotiganahalli Ramaiah) ಪೋಣಿಸಿರುವ ಚೆಂದದ ಸಾಲುಗಳಿಗೆ ಕದ್ರಿ ಮಣಿಕಾಂತ್ ಅಷ್ಟೇ ಇಂಪಾದ ಮ್ಯೂಸಿಕ್ ನೀಡಿದ್ದು, ಕೀರ್ತನಾ ಹೊಳ್ಳ (Keerthan Holla) ಹಾಗೂ ಹಿಂದು ನಾಗರಾಜ್ (Hindu Nagaraj) ಹಾಡಿಗೆ ಧ್ವನಿಯಾಗಿದ್ದಾರೆ. ಈ ಹಾಡು ಕೇಳುಗರನ್ನು ಸೆಳೆಯುತ್ತಿದೆ. ಕೋಟಿಗಾನಹಳ್ಳಿ ರಾಮಯ್ಯ ಬರೆದಿರುವ ಕಾದಂಬರಿ ಆಧಾರಿತ ಚಿತ್ರಕ್ಕೆ ನಿರ್ದೇಶಕ ನೀನಾಸಂ ಮಂಜು ಆ್ಯಕ್ಷನ್ ಕಟ್ (Director Neenasam Manju is the action cut) ಹೇಳಿದ್ದಾರೆ. ಮಂಜು ಚಿತ್ರಕಥೆಯ ಜತೆಗೆ ಕಲಾ ನಿರ್ದೇಶನ ಕೂಡ ನಿಭಾಯಿಸಿದ್ದಾರೆ. ಕೋಟಿಗಾನಹಳ್ಳಿ ರಾಮಯ್ಯ ಈ ಚಿತ್ರಕ್ಕೆ ಸಾಹಿತ್ಯ ಮತ್ತು ಸಂಭಾಷಣೆಯನ್ನೂ ರಚಿಸಿದ್ದಾರೆ. ಪ್ರಕೃತಿಯ ಮಡಿಲಿನಲ್ಲಿ ಬದುಕು ಕಟ್ಟಿಕೊಂಡಿದ್ದ ಬುಡಕಟ್ಟು ಜನರನ್ನು, ಅರಣ್ಯ ಇಲಾಖೆ ಒಕ್ಕಲೆಬ್ಬಿತು. ಇದರಿಂದ ಅವರ ಬದುಕು ಸಂಕಷ್ಟಕ್ಕೆ ಸಿಲುಕಿತು. ಹೆಣ್ಣುಮಕ್ಕಳು ಪಟ್ಟಣದಲ್ಲಿ ಮನೆಗೆಲಸಕ್ಕೆ ಸೇರಿ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಈ ರೀತಿ ಪಟ್ಟಣಕ್ಕೆ ಬಂದ ಬುಡಕಟ್ಟು ಜನಾಂಗದ ಬಾಲಕಿ ಮುತ್ತಮ್ಮ ಯಾನೆ ಕನ್ನೇರಿ ಮನೆಗೆಲಸ ಮಾಡುವಾಗ ಮನೆಯ ಮಾಲೀಕಳ ದೌರ್ಜನ್ಯಕ್ಕೆ ತುತ್ತಾಗಿ ಜೈಲು ಸೇರುತ್ತಾಳೆ. ಆಕೆ ಜೈಲಿನಿಂದ ಹೊರಬರಲು ನಡೆಸುವ ಹೋರಾಟದ ಕಥಾಹಂದರವೇ ಈ ‘ಕನ್ನೇರಿ’. ಕನ್ನೇರಿ ಸಿನಿಮಾದಲ್ಲಿ ಅರ್ಚನಾ ಮಧುಸೂಧನ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಅನಿತಾ ಭಟ್, ಎಂ.ಕೆ.ಮಠ್, ಅರುಣ್ ಸಾಗರ್, ಕರಿಸುಬ್ಬು, ಸರ್ದಾರ್ ಸತ್ಯ ಒಳಗೊಂಡ ಪ್ರತಿಭಾನ್ವಿತ ಕಲಾವಿದರ ತಂಡ ಚಿತ್ರದಲ್ಲಿದೆ. ಚಿತ್ರೀಕರಣ ಕಂಪ್ಲೀಟ್ ಮಾಡಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ಚಿತ್ರತಂಡ ಒಂದೊಂದೆ ಹಾಡುಗಳನ್ನು‌ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯ ಆರಂಭಿಸಿದೆ. ಉಳಿದಂತೆ ಬುಡ್ಡಿ ದೀಪ ಸಿನಿಮಾ ಹೌಸ್ ಬ್ಯಾನರ್ (Buddy deepa cinema house banner) ನಡಿ ಪಿ.ಪಿ ಹೆಬ್ಬಾರ್ (P P Hebbar) ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಗಣೇಶ್ ಹೆಗ್ಡೆ ಛಾಯಾಗ್ರಹಣ (Ganesh Hegde Photography), ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಸುಜಿತ್ ನಾಯಕ್ ಸಂಕಲನ ‘ಕನ್ನೇರಿ’ ಚಿತ್ರಕ್ಕಿದೆ.

- Advertisement -

Latest Posts

Don't Miss