ತುಮಕೂರು ಗ್ರಾಮ ಪಂಚಾಯತ್ (Tumkur Gram Panchayat) ಯಲ್ಲಿ ಲೈಬ್ರರಿ (Library) ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.. ಆಸಕ್ತ ಅಭ್ಯರ್ಥಿಗಳು ಮಾರ್ಚ್ 14ರ ಒಳಗೆ ಆಫ್ಲೈನ್ (Offline) ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಬಗ್ಗೆ ಮಾಹಿತಿ.
ಸಂಸ್ಥೆಯ ಹೆಸರು : ತುಮಕೂರು ಗ್ರಾಮ ಪಂಚಾಯತ್
ಹುದ್ದೆಗಳ ಸಂಖ್ಯೆ: 19
ಉದ್ಯೋಗ ಸ್ಥಳ: ತುಮಕೂರು, ಕರ್ನಾಟಕ
ಹುದ್ದೆಯ ಹೆಸರು: ಗ್ರಂಥಾಲಯ ಮೇಲ್ವಿಚಾರಕರು
ವೇತನ: ರೂ.12000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ: ತುಮಕೂರು ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ SSLC ಪೂರ್ಣಗೊಳಿಸಿರಬೇಕು.
ವಯೋಮಿತಿ : ತುಮಕೂರು ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗೆ ಮಾರ್ಚ್ 14ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳಾಗಿರಬೇಕು.
ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ? : ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಗ್ರಾಮ ಪಂಚಾಯತ್ ಕಚೇರಿಗೆ ಕಳುಹಿಸಿ.
ಕಚೇರಿ ವಿಳಾಸ : ಉಪನಿರ್ದೇಶಕ ಕಛೇರಿ
ಜಿಲ್ಲಾ ಕೇಂದ್ರ ಗ್ರಂಥಾಲಯ
ಟೌನ್ ಹಾಲ್ ಸರ್ಕಲ್, BH ರಸ್ತೆ,
ತುಮಕೂರು – 572101,
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16-02-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-03-2022
ಅಧಿಕೃತ ವೆಬ್‌ಸೈಟ್: tumkur.nic.in