Wednesday, March 12, 2025

Latest Posts

38 Congress ನಾಯಕರ ವಿರುದ್ಧ ಎಫ್ಐಆರ್..!

- Advertisement -

ಕೊರೋನಾ (corona) ಮಾರ್ಗಸೂಚಿಯನ್ನು ಗಾಳಿಗೆ ತೂರಿ ಮೇಕೆದಾಟು ಪಾದಯಾತ್ರೆ 2.0 ಕೈಗೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ (FIR against Congress leaders) ದಾಖಲಿಸಲಾಗಿದೆ. ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ರಾಮನಗರದಲ್ಲಿ (ramanagara) ನಿಂತಿದ್ದ ಮೇಕೆದಾಟು ಪಾದಯಾತ್ರೆಗೆ ನಿನ್ನೆ ಚಾಲನೆ ಸಿಕ್ಕಿದೆ. 2ನೇ ಹಂತದ ಪಾದಯಾತ್ರೆ ಮಾರ್ಚ್ (martch) 3ನೇ ತಾರೀಕು ಬೆಂಗಳೂರಿನ ನ್ಯಾಷನಲ್ ಕಾಲೇಜ್ ಮೈದಾನ (National College College grounds) ತಲುಪಲಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ (D. K. Shivakumar) ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಈ ಪಾದಯಾತ್ರೆ ಸಾಗುತ್ತಿದೆ. ಈಗ ಮೇಕೆದಾಟು ಪಾದಯಾತ್ರೆ (Mekedatu padayatre) 2.0 ಕೈಗೊಂಡಿರುವ ಕಾಂಗ್ರೆಸ್ ನಾಯಕರ (Congress leaders) ವಿರುದ್ಧ  ಎಫ್ಐಆರ್ (FIR) ದಾಖಲಿಸಲಾಗಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗಿದೆ ಆದ್ರೆ  ಕೊರೊನಾ ಮತ್ತೆ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ರಾಜ್ಯ ಸರ್ಕಾರ ಕೊರೊನಾ ನಿಯಮ ಪಾಲಿಸುವಂತೆ ಆದೇಶ ಹೊರಡಿಸಿದೆ. ಕೊರೊನಾ ನಿಯಮ (Corona Rule) ಲೆಕ್ಕಿಸದೆ ರಾಜ್ಯ ಕಾಂಗ್ರೆಸ್ ನಾಯಕರು  ಮೇಕೆದಾಟು ಪಾದಯಾತ್ರೆ ಆರಂಭಿಸಿದ್ದಾರೆ. ಮಾರ್ಗಸೂಚಿ ಪಾಲಿಸದೆ ಪಾದಯಾತ್ರೆ ಕೈಗೊಂಡ ನಾಯಕರಿಗೆ ಬಿಸಿ ಮುಟ್ಟಿಸಲು ಬಿಜೆಪಿ ಮುಂದಾಗಿದ್ದು, 38 ಮಂದಿ ವಿರುದ್ಧ ಕೇಸ್ ದಾಖಲಾಗಿದೆ. ಈಗ ಎಫ್ ಐ ಆರ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ (A1) ಮೊದಲ ಆರೋಪಿಯನ್ನಾಗಿ ಮಾಡಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ (A2), ಸಂಸದ ಡಿ ಕೆ ಸುರೇಶ್ (A3) ಸೇರಿದಂತೆ 38 ನಾಯಕರ ವಿರುದ್ಧ ಎಫ್ಐಆರ್ (FIR) ದಾಖಲಿಸಲಾಗಿದೆ. ಈ ಬಾರಿ ಯಶಸ್ವಿಯಾಗಿ ಮೇಕೆದಾಟು ಪಾದಯಾತ್ರೆ ನಡೆಸಲು ಕಾಂಗ್ರೆಸ್​ಗೆ​ ಮುಂದಾಗಿದೆ. ಆದ್ರೆ ರಾಮನಗರದಲ್ಲಿ ಫೆಬ್ರವರಿ 28ರ ವರೆಗೆ ಜಿಲ್ಲೆಯಾದ್ಯಂತ ಕೊರೊನಾ ಮಾರ್ಗಸೂಚಿ ಪಾಲನೆಗೆ ಅವಕಾಶ ನೀಡಲಾಗಿತ್ತು. ಆದ್ರೆ ಕಾಂಗ್ರೆಸ್ ಸಾವಿರಾರು ಜನರನ್ನು ಕಟ್ಟಿಕೊಂಡು ಪಾದಯಾತ್ರೆ ನಡೆಸುತ್ತಿದೆ. ಎಲ್ಲಾ ಕೊರೊನಾ ಮಾರ್ಗಸೂಚಿಯನ್ನು ಉಲ್ಲಂಘಿಸಿದೆ ಎಂದು ರಾಮನಗರ ತಹಶೀಲ್ದಾರ್ ವಿಜಯ್ ಕುಮಾರ್ ರಿಂದ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಹೀಗಾಗಿ ಪೊಲೀಸರು ಕಾಂಗ್ರೆಸ್ ನ  38 ಮಂದಿ ವಿರುದ್ಧ FIR ಹಾಕಿದ್ದಾರೆ.​ ರಾಮನಗರದ  ನಗರ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಿಸಲಾಗಿದೆ.

- Advertisement -

Latest Posts

Don't Miss