ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ಕುರಿತ ಸರ್ವಾನುಮತದ ನಿರ್ಣಯಕ್ಕೆ ಎಲ್ಲಾ ಪಕ್ಷಗಳಿಂದ ಧ್ವನಿಮತದ ಅಂಗೀಕಾರ

ಬೆಂಗಳೂರು: ತಮಿಳುನಾಡು ಸರ್ಕಾರಕ್ಕೆ ಇಂದು ಟಕ್ಕರ್ ಕೊಟ್ಟಂತ ಸಿಎಂ ಬಸವರಾಜ ಬೊಮ್ಮಾಯಿಯವರು, ವಿಧಾನಸಭೆಯಲ್ಲಿ ಅಧಿಕೃತವಾಗಿ ಮೇಕೆದಾಟು ಯೋಜನೆ ಬಗ್ಗೆ ನಿರ್ಣಯವನ್ನು ಮಂಡಿಸಿದರು. ಈ ನಿರ್ಣಯಕ್ಕೆ ಎಲ್ಲಾ ಪಕ್ಷಗಳಿಂದ ಸರ್ವಾನುಮತದ ಅಂಗೀಕಾರ ಕೂಡ ದೊರೆಯಿತು.

ಇಂದು ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಕೆಳಕಂಡ ಅಧಿಕೃತ ನಿರ್ಣಯವನ್ನು ಮಂಡಿಸಿದರು.

1. ಕರ್ನಾಟಕ ರಾಜ್ಯವು ಯೋಜಿಸಿರುವ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ವಿರೋಧಿಸಿ, ದಿನಾಂಶ 21 03, 2022 ರಂದು ತಮಿಳುನಾಡು ವಿಧಾನ ಸಭೆಯು ಸಭ್ಯವಲ್ಲದ ಭಾಷೆಯಲ್ಲಿ ಅಂಗೀಕರಿಸಿದ ಒಕ್ಕೂಟ ವಿರೋಧಿ ಮತ್ತು ಸಮರ್ಥನೀಯವಲ್ಲದ ನಿರ್ಣಯವನ್ನು ಮತ್ತು ತಮಿಳುನಾಡು ರಾಜ್ಯವು ತನ್ನ ಪ್ರಾದೇಶಿಕ ವ್ಯಾಪ್ತಿಯಲ್ಲಿ ಏಕಪಕ್ಷೀಯವಾಗಿ ಯೋಜಿಸಿರುವ ಕಾನೂನುಬಾಹಿರ ಯೋಜನೆಗಳನ್ನು ಸಹ ಈ ಸದನವು ಗಣನೆಗೆ ತೆಗೆದುಕೊಂಡಿರುತ್ತದೆ.

2. ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯವು ಕಾವೇರಿ ಜಲ ವಿವಾದ ನ್ಯಾಯಾಧಿಕರಣದ ತೀರ್ಪನ್ನು ಮಾರ್ಪಡಿಸಿ ಸಾಮಾನ್ಯ ಜಲ ವರ್ಷದಲ್ಲಿ ಬಿಳಿಗುಂಡ್ಲುವಿನಲ್ಲಿ 177.25 30 ನೀರಿನ ಪ್ರಮಾಣವನ್ನು ಖಚಿತಪಡಿಸುವಂತ ನಿಗದಿಪಡಿಸಿದೆ. ಮಾನ್ಯ ಸರ್ವೋಚ್ಚ ನ್ಯಾಯಾಲಯವು ಹಂಚಿಕೆ ಮಾಡಿರುವಂತೆ ಬೆಂಗಳೂರು ಮೆಟ್ರೋಪಾಲಿಟನ್ ನಗರದ ಕುಡಿಯುವ ನೀರಿನ ಅಗತ್ಯತೆಗೆ 24 ಟಿಎಂಸಿ (4.75 consumptive use) ನೀರನ್ನು ಸುಸ್ಥಿರಗೊಳಿಸಲು ಹಾಗೂ ತತ್ಪರಿಮಾಣವಾಗಿ ಜಲವಿದ್ಯುತ್ ಉತ್ಪಾದನೆಗೆ ಅಂತರ್-ರಾಜ್ಯ ನದಿ ಕಾವೇರಿಗೆ ಅಡ್ಡಲಾಗಿ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ಯೋಜಿಸಲಾಗಿದೆ. ಸದರಿ ಯಾವುದೇ ಭಾದಕ ಅಥವಾ ಹಾನಿಯಾಗುವುದಿಲ್ಲ. ಯೋಜನೆಯಿಂದ ತಮಿಳುನಾಡು ರಾಜ್ಯಕ್ಕೆ ಯಾವುದೇ ಭಾಧಕ ಅಥವಾ ಹಾನಿಯಾಗುವುದಿಲ್ಲ…

3. ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ನಿರ್ಮಿಸಲು ಕರ್ನಾಟಕ ರಾಜ್ಯವು ತನ್ನ ಸಾಂವಿಧಾನಿಕ ಅಧಿಕಾರ ವ್ಯಾಪ್ತಿಯನ್ನು ಹೊಂದಿದೆ. ರಾಷ್ಟ್ರೀಯ ಜಲನೀತಿಯೂ ಸಹ ಕುಡಿಯುವ ನೀರಿಗೆ ಪ್ರಥಮ ಆದ್ಯತೆಯನ್ನು ನೀಡುತ್ತದೆ. ಈ ಕುಡಿಯುವ ನೀರಿನ ಯೋಜನೆಯಿಂದ ನ್ಯಾಯಾಧಿಕರಣದ ಆದೇಶವನ್ನು ಯಾವುದೇ ರೀತಿಯಲ್ಲಿ ಉಲ್ಲಂಘಿಸುವುದಿಲ್ಲ ಎಂಬುದಾಗಿ ನಿರ್ಣಯವನ್ನು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದರು.

ಸಿಎಂ ಬೊಮ್ಮಾಯಿ ಮಂಡಿಸಿದಂತ ಮೇಕೆದಾಟು ಯೋಜನೆ ನಿರ್ಣಯದಲ್ಲಿ ನದಿ ಜೋಡಣೆಯ ಡಿಪಿಆರ್ ಅನ್ನು ಕರ್ನಾಟಕ ಸರ್ಕಾರ ಒಪ್ಪುವವರೆಗೆ ಅನುಮೋದಿಸದಂತೆ ಎಂಬ ಸಣ್ಣ ತಿದ್ದುಪಡಿಯೊಂದಿಗೆ ಎಲ್ಲಾ ಪಕ್ಷಗಳಿಂದ ಸರ್ವಾನುಮತದ ಅಂಗೀಕಾರವನ್ನು ನೀಡಲಾಯಿತು. ಈ ಮೂಲಕ ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ನಿರ್ಣಯ ಅಂಗೀಕಾರಗೊಂಡಿದೆ.

About The Author