ಮಾ.28ರಿಂದ ಆರಂಭವಾಗುವ ‘SSLC ಪರೀಕ್ಷೆ’ಗೆ ಸಮವಸ್ತ್ರ ಕಡ್ಡಾಯ – ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಸೋಮವಾರದಿಂದ ಆರಂಭವಾಗಲಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಹಾಜರಾಗಬೇಕು. ವಸ್ತ್ರ ಸಂಹಿತೆಯನ್ನು ಪಾಲಿಸದೇ ಇದ್ದರೇ ಪರೀಕ್ಷೆಗೆ ಅವಕಾಶ ನೀಡೋದಿಲ್ಲ ಎಂಬುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಖಡಕ್ ಆದೇಶದಲ್ಲಿ ತಿಳಿಸಿದೆ.

ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಪ್ರಾಥಮಿಕ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ದಿನಾಂಕ 28-03-2022 ರಿಂದ ದಿನಾಂಕ 11-04-2022ರವರೆಗೆ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ ನಿಗದಿ ಪಡಿಸಲಾಗಿದೆ. ಈ ಪರೀಕ್ಷೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ನಿಗದಿ ಪಡಿಸಿರುವಂತ ವಸ್ತ್ರ ಸಂಹಿತೆಯ ನಿಯಮವನ್ನು ಪಾಲಿಸುವಂತೆ ತಿಳಿಸಿದೆ.

ಕರ್ನಾಟಕ ಹೈಕೋರ್ಟ್ ತೀರ್ಪಿನಲ್ಲಿಯೂ ವಸ್ತ್ರ ಸಂಹಿತೆಯ ನಿಯಮ ಪಾಲಿಸುವಂತೆ ಆದೇಶಿಸಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನಿಗದಿ ಪಡಿಸಿರುವಂತ ಸಮವಸ್ತ್ರ, ಖಾಸಗಿ ಶಾಲೆಗಳಲ್ಲಿ ಆಡಳಿತ ಮಂಡಳಿ ನಿಗದಿ ಪಡಿಸಿರುವಂತ ಸಮವಸ್ತ್ರವನ್ನು ಧರಿಸಿ, ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಿದೆ.

About The Author