ಮೈಸೂರು: ಜಿಲ್ಲೆಯಲ್ಲಿ ನಿಗದಿಯಾಗಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ, ಪರೀಕ್ಷೆ ಬರೆಯುತ್ತಿದ್ದಂತ ಸಂದರ್ಭದಲ್ಲಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರೋ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ಟಿ.ನರಸೀಪುರದ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಿಗದಿ ಪಡಿಸಲಾಗಿತ್ತು. ಈ ಪರೀಕ್ಷೆಗೆ ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ಅನುಶ್ರೀ ಹಾಜರಾಗಿದ್ದರು.
ಪರೀಕ್ಷೆ ಬರೆಯುತ್ತಿದ್ದಂತ ಸಂದರ್ಭದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿದ್ದಾಳೆ. ಕೂಡಲೇ ಆಕೆಯನ್ನು ಟಿ.ನರಸೀಪುರ ಸಾರ್ವನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆದ್ರೇ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.




