ಇಮ್ರಾನ್ ಖಾನ್ ವಿರುದ್ಧದ ಪಾಕ್ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡನೆ

ಪಾಕಿಸ್ತಾನ: ರಾಷ್ಟ್ರೀಯ ಅಸೆಂಬ್ಲಿಯ ವಿರೋಧ ಪಕ್ಷದ ನಾಯಕ ಶೆಹಬಾಜ್ ಷರೀಫ್ ಅವರು ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ಗೊತ್ತುವಳಿಯನ್ನು ಮಂಡಿಸಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.

ಇಂದು ಪಾಕಿಸ್ತಾನ್ ಕೆಳಗಿನ ಸಂಸತ್ ನಲ್ಲಿ ವಿರೋಧ ಪಕ್ಷಗಳಿಂದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿರೋದಾಗಿ ತಿಳಿದು ಬಂದಿದೆ. ಇಂದು ಅವಿಶ್ವಾಸ ಗೊತ್ತುವಳಿಯನ್ನು ಮಂಡಿಸಿದ ಬಳಿಕ, ಸ್ಪೀಕರ್ ಸದನವನ್ನು ಮಾರ್ಚ್ 31ರವರೆಗೆ ಮುಂದೂಡಿದ್ದಾರೆ.

ಪಾಕಿಸ್ತಾನ್ ಅಸೆಂಬ್ಲಿಯಲ್ಲಿ ವಿರೋಧ ಪಕ್ಷಗಳು ಮಂಡಿಸಿದಂತ ಅವಿಶ್ವಾಸಗೊತ್ತುವಳಿ ಸಂಬಂಧ, ಏಪ್ರಿಲ್ 4ರಂದು ಅವಿಶ್ವಾಸಗೊತ್ತುವಳಿ ನಡೆಸೋದಕ್ಕೂ ನಿಗದಿ ಪಡಿಸಲಾಗಿದೆ. ಹೀಗಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಪದಾತ್ಯಾಗಕ್ಕೆ ಸಮಯ ಹತ್ತಿರವಾಗಿದೆ ಎಂದು ಹೇಳಲಾಗುತ್ತಿದೆ.

About The Author