ಬೆಂಗಳೂರು: ಉಪ ಲೋಕಾಯುಕ್ತರಾಗಿ ನೇಮಕಗೊಂಡಿದ್ದಂತ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಅವರು, ಇಂದು ಪದವಿಯ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇಂದು ರಾಜಭವನದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಕೆ ಎನ್ ಫಣಿಂದ್ರ ಅವರಿಗೆ ಉಪಲೋಕಾಯುಕ್ತ ಪದವಿಯ ಅಧಿಕಾರ ಪ್ರಮಾಣ ವಚನವನ್ನು ಭೋಧಿಸಿದರು.ಈ ಮೂಲಕ ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಅವರು ಪದವಿಯ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ಉಪ ಸಭಾಪತಿ ಆನಂದ್ ಮಾಮನಿ, ಗೃಹ ಸಚಿವ ಅರಗ ಜ್ಞಾನೆಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ, ಶಾಸಕ ಸುರೇಶ್ ಕುಮಾರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮತ್ತು ಇತರರು ಉಪಸ್ಥಿತರಿದ್ದರು.




