ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಎಎಪಿ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ಐಪಿಎಸ್ ಹುದ್ದೆಗೆ ಸ್ವಯಂ ನಿವೃತ್ತಿ ಪಡೆದ ಬಳಿಕ, ಇಂದು ದೆಹಲಿಯಲ್ಲಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ಪಕ್ಷವನ್ನು ಸೇರ್ಪಡೆಗೊಂಡರು.

ಇಂದು ದೆಹಲಿಯ ಎಎಪಿ ಕಚೇರಿಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು, ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಂದ ಎಎಪಿ ಟೋಫಿ, ಶಾಲು ನೀಡಿ, ಎಎಪಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಕರ್ನಾಟಕ ಎಎಪಿ ಉಸ್ತುವಾರಿ ದಿಲೀಪ್ ಪಾಂಡೆ, ರಾಜ್ಯ ಎಎಪಿ ಅಧ್ಯಕ್ಷ ಪೃಥ್ವಿ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಸಂಜಿತ್ ಸಾವನಿ ಸೇರಿದಂತೆ ಇತರರು ಉಪಸ್ಥಿತರಾಗಿದ್ದರು.

About The Author