BREAKING NEWS: ಏಪ್ರಿಲ್ 10ರಿಂದ 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡಿಕೆ – ಕೇಂದ್ರ ಆರೋಗ್ಯ ಸಚಿವಾಲಯ

ನವದೆಹಲಿ: ಕೋವಿಡ್ ಮೊದಲ ಹಾಗೂ 2ನೇ ಡೋಸ್ ಬಳಿಕ, ಮೂರನೇ ಡೋಸ್ ಬೂಸ್ಟರ್ ಲಸಿಕೆಯಾಗಿ ಕೇಂದ್ರ ಸರ್ಕಾರದಿಂದ ನೀಡೋದಕ್ಕೆ ಅನುಮತಿಸಲಾಗಿತ್ತು. ಮೊದಲು ಮುಂಚೂಣಿ ಆರೋಗ್ಯ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟವರಿಗೆ ನೀಡಿದ್ದಂತ ಆರೋಗ್ಯ ಸಚಿವಾಲಯವು, ಈಗ 18 ವರ್ಷ ಮೇಲ್ಪಟ್ಟ ಎಲ್ಲಾ ವಯಸ್ಕರಿಗೆ ಖಾಸಗಿ ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ಏಪ್ರಿಲ್ 10ರಿಂದ ಬೂಸ್ಟರ್ ಡೋಸ್ ಪಡೆಯುವಂತೆ ತಿಳಿಸಿದೆ.

ಈ ಕುರಿತು ಮಾಹಿತಿ ಬಿಡುಗಡೆ ಮಾಡಿರುವಂತ ಕೇಂದ್ರ ಆರೋಗ್ಯ ಸಚಿವಾಲಯವು, 18 ವರ್ಷ ವಯಸ್ಸಿನವರು ಮತ್ತು ಎರಡನೇ ಡೋಸ್ ನೀಡಿದ ನಂತರ 9 ತಿಂಗಳು ಪೂರೈಸಿದವರು, ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದೆ.

ಅರ್ಹ ಜನಸಂಖ್ಯೆಗೆ ಮೊದಲ ಮತ್ತು ಎರಡನೇ ಡೋಸ್ ಗಾಗಿ ಸರ್ಕಾರಿ ಲಸಿಕಾ ಕೇಂದ್ರಗಳ ಮೂಲಕ ನಡೆಯುತ್ತಿರುವ ಉಚಿತ ಲಸಿಕಾ ಕಾರ್ಯಕ್ರಮ ಮತ್ತು ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60+ ಜನಸಂಖ್ಯೆಗೆ ಮುನ್ನೆಚ್ಚರಿಕೆಯ ಡೋಸ್ ಮುಂದುವರಿಯುತ್ತದೆ ಮತ್ತು ತ್ವರಿತಗೊಳಿಸಲಾಗುವುದು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

About The Author