ಶ್ರೀರಾಮನವಮಿ ಹಬ್ಬದ ದಿನವೇ ಭೀಕರ ಅಪಘಾತ: ಎರಡು ಪ್ರತ್ಯೇಕ ಪ್ರಕರಣಗಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ತುಮಕೂರು/ಯಾದಗಿರಿ: ಶೀರಾಮನವಮಿ ಹಬ್ಬದ ಸಂದರ್ಭದಲ್ಲಿಯೇ ತುಮಕೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನಡೆದಂತ ಎರಡು ಪ್ರತ್ಯೇಕ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ತುಮಕೂರು ತಾಲೂಕಿನ ಕಟ್ಟಿಗೇನಹಳ್ಳಿ ಗೇಟ್ ಬಳಿಯಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ ಕಾರಿನಲ್ಲಿದ್ದ ಮಗುವೊಂದು ಗಂಭೀರವಾಗಿ ಗಾಯಗೊಂಡಿದೆ. ಇನ್ನುಳಿದಂತೆ ಕಾರಿನಲ್ಲಿದ್ದ ಮೂವರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನೂ ಯಾದಗಿರಿ ಜಿಲ್ಲೆಯ ಯರಗೋಳದ ಹಂಪಿನಕಟ್ಟೆ ಬಳಿಯಲ್ಲಿ, ಲಾರಿಯೊಂದು ಆಟೋಗೆ ಡಿಕ್ಕಿಯಾದ ಪರಿಣಾಮ, ಆಟೋದಲ್ಲಿದ್ದಂತ ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿರುವಂತ ಚಾಲಕನ ಸ್ಥಿತಿ ಚಿಂತಾಜನಕವಾಗಿರೋದಾಗಿ ತಿಳಿದು ಬಂದಿದೆ.

About The Author