ಬೆಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಯಿಂದಾಗಿ ಕುಟುಂಬವು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 1 ಕೋಟಿ ಪರಿಹಾರ ಘೋಷಿಸಬೇಕು. ಅವರ ಪತ್ನಿಗೆ ಸರ್ಕಾರಿ ನೌಕರಿ ಕೊಡಬೇಕು ಎಂಬುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಂತೋಷ್ ಪಾಟೀಲ್ ಮಾಡಿರುವ ಕೆಲಸ ಕಾಮಗಾರಿ ಬಿಲ್ ಕ್ಲಿಯರ್ ಮಾಡ್ಬೇಕು. ನಾವು ನಾಳೆಯಿಂದ ಐದು ದಿನಗಳು, 9 ತಂಡದ ನೇತೃತ್ವದಲ್ಲಿ ಹೋರಾಟ ಮಾಡುತ್ತೇವೆ. ಎಲ್ಲ ಜಿಲ್ಲಾ ಕೇಂದ್ರಗಲ್ಲಿ ಪಾದಯಾತ್ರೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಕೊಡುತ್ತೇವೆ ಎಂದರು.
ಕೇಸ್ ಮುಚ್ಚಿಹಾಕಲು ಸರ್ಕಾರ ಪ್ರಯತ್ನ ಮಾಡುತ್ತಿದ್ದಾರೆ. ಸಿಎಂ ಬೊಮ್ಮಾಯಿ ಅವರೇ ಅವರ ಬಗ್ಗೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ನಿಷ್ಪಕ್ಷಪಾತವಾಗಿ ತನಿಖೆಯಾಗ ಬೇಕಾದ್ರೆ ಹಾಲಿ ಹೈಕೋರ್ಟ್ ನ್ಯಾಯಧೀಶರ ಸಮಕ್ಷಮದಲ್ಲಿ ತನಿಖೆಯಾಗಬೇಕು. ಇಲ್ಲಾಂದ್ರೆ ಈಶ್ವರಪ್ಪ ಸಾಕ್ಷಿ ನಾಶ ಮಾಡ್ತಾರೆ. ಈಶ್ವರಪ್ಪ ಏನು ಸಾಮಾನ್ಯ ವ್ಯಕ್ತಿ ಅಲ್ಲ ಎಂದರು.
ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಭ್ರಷ್ಟಾಚಾರಕ್ಕಾಗಿ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭ್ರಷ್ಟಾಚಾರದಿಂದ ಕರ್ನಾಟಕ ನಲುಗಿ ಹೋಗಿದೆ. ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಗೌಡ ಪಾಟೀಲ್ ದೂರು ಕೊಟ್ಟಿದ್ದಾರೆ. ದೂರಿನಲ್ಲಿ ಪ್ರಶಾಂತ್ ಪಾಟೀಲ್ ಈಶ್ವರಪ್ಪ ಹೇಳಿದ ಮೇಲೆ ಕೆಲಸ ಮಾಡಿದ್ದಾರೆ ಎಂದು ವಿವರವಾದ ಮಾಹಿತಿ ದೂರಿನಲ್ಲಿ ಹೇಳಿದ್ದಾರೆ. ಅವರ ಪಿಎ ಬಸವರಾಜ್, ರಮೇಶ್ 40 ಕಮಿಷನ್ ಕೇಳಿದ್ದಾರೆ. ಕಮಿಷನ್ ಕೊಡದೇ ಬಿಲ್ ಕಿಯ್ಲರ್ ಮಾಡಲ್ಲ ಎಂದು ಹೇಳಿದ್ದಾರೆ. ಇಷ್ಟೆಲ್ಲ ದೂರಿನಲ್ಲಿ ಹೇಳಿದ್ರೂ ಭ್ರಷ್ಟಾಚಾರ ಕಾಯ್ದೆ ಅಡಿ ಕೇಸ್ ದಾಖಲು ಮಾಡಿಲ್ಲ. ಉದ್ದೇಶಪೂರ್ವಕವಾಗಿ ಭ್ರಷ್ಟಾಚಾರ ಕಾಯ್ದೆ ಅಡಿ ಕೇಸ್ ಹಾಕಿಲ್ಲ ಎಂದು ವಾಗ್ದಾಳಿ ನಡೆಸಿದರು.
ನನ್ನ ಸಾವಿಗೆ ನೇರವಾದ ಕಾರಣ ಈಶ್ವರಪ್ಪ ಎಂದು ಸಂತೋಷ್ ಪಾಟೀಲ್ ಹೇಳಿದ್ದಾರೆ. ಬಿಲ್ ಕಿಯ್ಲರ್ ಆಗದೇ ಇದ್ರೆ ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಪತ್ರದಲ್ಲಿ ಸಂತೋಷ್ ಪಾಟೀಲ್ ಹೇಳಿದ್ದಾರೆ. ಕೂಡಲೇ ಭ್ರಷ್ಟಾಚಾರ ಕಾಯ್ದೆ ಅಡಿ ಕೇಸ್ ಹಾಕ್ಬೇಕು. ಕೂಡಲೇ ಈಶ್ವರಪ್ಪನವರನ್ನ ಬಂಧಿಸಬೇಕು. ಸೆಕ್ಷನ್ 306 ಅಡಿ 10 ವರ್ಷ ಜೈಲು ಶಿಕ್ಷೆ ಇದೆ ಎಂದು ಹೇಳಿದರು.




