ಬೆಂಗಳೂರು: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಆಯುಷ್ಮಾನ್ ಭಾರತ್ ಕಾರ್ಯಕ್ರಮದ ನಾಲ್ಕನೇ ವರ್ಷದ ಅಂಗವಾಗಿ ಏಪ್ರಿಲ್ 18 ರಿಂದ ಏಪ್ರಿಲ್ 22ರವರೆಗೆ ರಾಜ್ಯದ ತಾಲೂಕು ಕೇಂದ್ರಗಳಲ್ಲಿ ಜನರ ಆರೋಗ್ಯ ತಪಾಸಣೆ, ಚಿಕಿತ್ಸೆ, ಸಲಹೆ ನೀಡುವ ಒಂದು ದಿನದ ಆರೋಗ್ಯ ಮೇಳ ನಡೆಯಲಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಆರೋಗ್ಯ ಮೇಳೆದಲ್ಲಿ ಸಾರ್ವಜನಿಕರಿಗೆ ರೋಗ ಪತ್ತೆ, ಚಿಕಿತ್ಸೆ ಹಾಗೂ ಆರೋಗ್ಯ ವರ್ಧಕ ಸಲಹೆಗಳನ್ನು ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದೆ.
ಇನ್ನೂ ಆರೋಗ್ಯ ಮೇಳದಲ್ಲಿ ನೋಂದಣಿ, ಡಿಜಿಟಲ್ ಐಡಿ ರಚನೆಯನ್ನು ಉಚಿತವಾಗಿ ಮಾಡಲಾಗುವುದು. ವೈದ್ಯಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು, ತಜ್ಞ ವೈದ್ಯರೊಂದಿಗೆ ಉಚಿತ ಸಲಹೆ, ಅಸಾಂಕ್ರಾಮಿಕ ರೋಗಗಳಾದ ಮಧುಮೇಹ, ಅಧಿಕ ರಕ್ತದೊತ್ತಡ, ಬಾಯಿ, ಗರ್ಭಕೋಶದ ಬಾಯಿ ಮತ್ತು ಸ್ತನ ಕ್ಯಾನ್ಸರ್ ಮುಂತಾದ ರೋಗಗಳಿಗೆ ಅಗತ್ಯವಿದ್ದ ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗುತ್ತದೆ.




