ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ ಪ್ರಕರಣ: ಡಿಕೆಶಿ, ಸಿದ್ದು ಸೇರಿ 36 ಕಾಂಗ್ರೆಸ್ ಮುಖಂಡರ ವಿರುದ್ಧ FIR ದಾಖಲು

ಬೆಂಗಳೂರು: ಕೆ.ಎಸ್ ಈಶ್ವರಪ್ಪನವರು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ನಡೆಸಿದಂತ ಸಿಎಂ ಮನೆ ಮುತ್ತಿಗೆ ಪ್ರಕರಣದಲ್ಲಿ, ಇದೀಗ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಸೇರಿ 36 ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಹೌದು.. ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಸೇರಿದಂತೆ 36 ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕಾಂಗ್ರೆಸ್ ನಾಯಕರ ವಿರುದ್ಧ ಐಪಿಸಿ ಸೆಕ್ಷನ್ 341,143 ಮತ್ತು 103 ಕೆಪಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ

About The Author