ಲಖಿಂಪುರ ಹಿಂಸಾಚಾರ: ಆಶಿಶ್ ಮಿಶ್ರಾ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ಒಂದು ವಾರದೊಳಗೆ ಶರಣಾಗುವಂತೆ ಸೂಚನೆ

ನವದೆಹಲಿ: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ.

ಲೈವ್ ಲಾ ವರದಿ ಮಾಡಿರುವಂತೆ ಒಂದು ವಾರದೊಳಗೆ ಶರಣಾಗುವಂತೆ ಆಶೀಶ್ ಮಿಶ್ರಾ ಅವರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಆಶಿಶ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ ಜಾಮೀನನ್ನು ಪ್ರಶ್ನಿಸಿ ಕುಟುಂಬ ಸದಸ್ಯರ ಸಂತ್ರಸ್ತರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠವು ಈ ತೀರ್ಪನ್ನು ಪ್ರಕಟಿಸಿದೆ.

ಆಶಿಶ್ ಮಿಶ್ರಾ ಅವರ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ರೈತರು ಸಲ್ಲಿಸಿದ್ದ ಅರ್ಜಿಯ ಮೇಲಿನ ಆದೇಶವನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 4 ರಂದು ಕಾಯ್ದಿರಿಸಿತ್ತು.

About The Author