ಜಿಲ್ಲಾಧಿಕಾರಿ ಕಾರು ಪಲ್ಟಿ: ಡಿಸಿ ಪತ್ನಿ, ಮಕ್ಕಳಿಗೆ ಸಣ್ಣಪುಟ್ಟ ಗಾಯ

ವಿಜಯಪುರ: ಜಿಲ್ಲೆಯ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರು ಕುಟುಂಬ ಸಮೇತರಾಗಿ ದಾವಣಗೆರೆಯಿಂದ ತೆರಳುತ್ತಿದ್ದ ವೇಳೆಯಲ್ಲಿ, ಕಾರು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅವಘಾತದಲ್ಲಿ ಡಿಸಿ ಪತ್ನಿ, ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿರೋದಾಗಿ ತಿಳಿದು ಬಂದಿದೆ.

ಡಿಸಿ ವಿಜಯಮಹಾಂತೇಶ ದಾನಮ್ಮನವರ ದಾವಣಗೆರೆಯಿಂದ ವಿಜಯಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಲಾರಿಗೆ ಡಿಕ್ಕಿಯಾಗುತ್ತಿದ್ದರಿಂದ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಕಾರು ಪಲ್ಟಿಯಾಗಿ ಅಪಘಾತಗೊಂಡ ಪರಿಣಾಮ, ಡಿಸಿ, ಅವರ ಪತ್ನಿ ಹಾಗೂ ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿರೋದಾಗಿ ತಿಳಿದು ಬಂದಿದೆ. ಅವರನ್ನು ಎಸ್ ಡಿ ಎಂ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಲಾಗಿದೆ.

About The Author