ಮೈಸೂರು: ಸಂಬಂಧಿಕರೊಬ್ಬರ ಮದುವೆ ಮುಗಿಸಿಕೊಂಡು ತಮ್ಮ ಊರಿಗೆ ಬುಲೆರೋ ವಾಹನದಲ್ಲಿ ಹಿಂದಿರುಗುತ್ತಿದ್ದ ವೇಳೆಯಲ್ಲಿ, ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಈ ಪರಿಣಾಮ ಅದರಲ್ಲಿದ್ದಂತ 6 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರೋ ಘಟನೆ, ಜಿಲ್ಲೆಯ ಹುಣಸೂರು ಬಳಿಯಲ್ಲಿ ನಡೆದಿದೆ.
ಮೈಸೂರಿನ ಹಣಸೂರು ಬಳಿಯ ಅರಸು ಕಲ್ಲಹಳ್ಳಿ ಬಳಿಯಲ್ಲಿ ಕೊಡಗು ಜಿಲ್ಲೆಯ ಪಾಲಿಬೆಟ್ಟದ ಗ್ರಾಮದವರು, ಮೈಸೂರಿಗೆ ತೆರಳಿ ಮದುವೆ ಮುಗಿಸಿಕೊಂಡು ವಾಪಾಸ್ ಆಗುತ್ತಿದ್ದಂತ ಸಂದರ್ಭದಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಬುಲೆರೋ ವಾಹನ ಮರಕ್ಕೆ ಡಿಕ್ಕಿಯಾದ ಪರಿಣಾಮ ರಾಜೇಶ್, ಬಾಬು, ವಿನುತ್, ದಯಾನಂತ್, ಸಂತೋಷ್ ಹಾಗೂ ಅನೀಲ್ ಎಂಬುವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನುಳಿದ ಮೂವರ ಸ್ಥಿತಿ ಚಿಂತಾಜನಕವಾಗಿರೋದಾಗಿ ತಿಳಿದು ಬಂದಿದೆ.
ಗಾಯಾಳುಗಳನ್ನು ಹುಣಸೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.




