ಶಿವಮೊಗ್ಗದಲ್ಲಿ ಹತ್ಯೆಗೀಡಾದ ಹರ್ಷ ಮನೆಗೆ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಭೇಟಿ, ಕುಟುಂಬಸ್ಥರಿಗೆ ಸಾಂತ್ವಾನ

ಶಿವಮೊಗ್ಗ: ಎರಡು ತಿಂಗಳ ಹಿಂದೆ ಇಲ್ಲಿ ನಡೆದ ಕೋಮುಗಲಭೆಯಲ್ಲಿ ಮೃತನಾದ ಹಿಂದೂಪರ ಕಾರ್ಯಕರ್ತ ಹರ್ಷ ಅವರ ಮನೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಬುಧವಾರ ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಅವರು, ಹರ್ಷ ಅವರ ತಾಯಿ, ಸೋದರಿಯರು ಮತ್ತು ಇತರರೊಂದಿಗೆ ಮಾತನಾಡಿ, ಸಾಂತ್ವನ ಹೇಳಿದರು.
‘ಸಮಾಜದ ಒಳಿತಿಗಾಗಿ ಸಕ್ರಿಯನಾಗಿದ್ದ ಹರ್ಷನನ್ನು ಕಳೆದುಕೊಂಡಿರುವುದು ಸಮಾಜಕ್ಕಾದ ನಷ್ಟವಾಗಿದೆ. ಇಂತಹ ಸಂದರ್ಭಗಳಲ್ಲಿ ಇಡೀ ಸಮಾಜವೇ ನೊಂದ ಕುಟುಂಬದ ಆಸರೆಗೆ ನಿಲ್ಲಬೇಕು’ ಎಂದು ಅವರು ನುಡಿದರು.

ಹರ್ಷನ ಸಾವಿನ ಸಂದರ್ಭದಲ್ಲಿ ಸಚಿವರು ತಮ್ಮ ಪ್ರತಿಷ್ಠಾನದಿಂದ ವೈಯಕ್ತಿಕವಾಗಿ 10 ಲಕ್ಷ ರೂ.ಗಳ ನೆರವನ್ನು ಘೋಷಿಸಿ, ಹಣವನ್ನು ನೇರವಾಗಿ ಹರ್ಷನ ತಾಯಿಯ ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

About The Author