ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯಲು ಅವಕಾಶ ನೀಡದ ಹಿನ್ನಲೆ: ದ್ವಿತೀಯ ಪಿಯು ಪರೀಕ್ಷೆ ಬಿಟ್ಟು ಮನೆಗೆ ವಾಪಾಸ್

ಉಡುಪಿ: ಹಿಜಾಬ್ ಧರಿಸಿಯೇ ದ್ವಿತೀಯ ಪಿಯು ಪರೀಕ್ಷೆ ಬರೆಯೋದಕ್ಕೆ ಅವಕಾಶ ನೀಡುವಂತೆ ಹಿಜಾಬ್ ಹೋರಾಟಗಾರ್ತಿ ವಿದ್ಯಾರ್ಥಿನಿಯಕರು, ಪರೀಕ್ಷಾ ಕೇಂದ್ರದ ಮುಂದೆ ಹೈಡ್ರಾಮಾವೇ ನಡೆಸಿದ್ದಾರೆ. ಆದ್ರೇ.. ಕೋರ್ಟ್ ಆದೇಶದಂತೆ ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆಯೋದಕ್ಕೆ ಅವಕಾಶ ಎಂದಿದ್ದಾರೆ. ಹೀಗಾಗಿ ಪರೀಕ್ಷೆ ಬರೆಯದೇ ಮನೆಗೆ ವಾಪಾಸ್ ಆಗಿದ್ದಾರೆ.

ಇಂದು ಆರಂಭಗೊಂಡಂತ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಕೊನೆಯ ಕ್ಷಣದಲ್ಲಿ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರವನ್ನು ಪಡೆದಂತ ಹಿಜಾಬ್ ಹೋರಾಟಗಾರ್ತಿಯರಾದ ಆಲಿಯಾ ಅಸಾದಿ ಹಾಗೂ ರೇಷ್ಮಾ ಎಂಬ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯೋದಕ್ಕೆ ಅನುಮತಿ ಕೋರಿದ್ದಾರೆ.

ಈ ಸಂದರ್ಭದಲ್ಲಿ ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿ, ಕೋರ್ಟ್ ಆದೇಶವಿದೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯೋದಕ್ಕೆ ಅವಕಾಶವಿಲ್ಲ. ಸಮವಸ್ತ್ರ ಸಂಹಿತೆ ಪರೀಕ್ಷೆಗೆ ಕಡ್ಡಾಯ ಎಂದು ಮನವೊಲಿಕೆ ಮಾಡಿದ್ದಾರೆ. ಜೊತೆಗೆ ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆಯುವಂತೆಯೂ ಮನವಿ ಮಾಡಿದ್ದಾರೆ. ಆದ್ರೇ.. ಹಿಜಾಬ್ ತೆಗೆದು ಪರೀಕ್ಷೆ ಬರೆಯಲ್ಲ, ನಾವು ಮನೆಗೆ ವಾಪಾಸ್ ಹೋಗುವುದಾಗಿ ಪರೀಕ್ಷೆ ಬಿಟ್ಟು ಮನೆಗೆ ವಾಪಾಸ್ ಆಗಿದ್ದಾರೆ.

About The Author