ಪಿಎಸ್ಐ ಪರೀಕ್ಷೆ ಅಕ್ರಮ: ವಿಚಾರಣೆಗೆ ಹಾಜರಾಗುವಂತೆ ಶಾಸಕ ಪ್ರಿಯಾಂಕ್ ಖರ್ಗೆಗೆ ನೋಟಿಸ್

ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ನಿರಂತರವಾಗಿ ಸುದ್ದಿಗೋಷ್ಠಿ ನಡೆಸಿ, ಅಕ್ರಮವನ್ನು ಬಯಲಿಗೆಳೆಯುತ್ತಿರುವಂತ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಗೆ, ನಿಮ್ಮ ಬಳಿಯಲ್ಲಿರುವಂತ ದಾಖಲೆ ಸಹಿತ, ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್ ಜಾರಿಗೊಳಿಸಿದೆ.

ಈ ಸಂಬಂಧ ನೋಟಿಸ್ ನೀಡಿರುವಂತ ಸಿಐಡಿ ಪೊಲೀಸರು, ಇಂದು ಬೆಳಿಗ್ಗೆ 11.30ಕ್ಕೆ ಸಿಐಡಿ ಕೇಂದ್ರ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಶಾಸಕ ಪ್ರಿಯಾಂಕ್ ಖರ್ಗೆಗೆ ನೋಟಿಸ್ ನಲ್ಲಿ ತಿಳಿಸಿದೆ.

ಈ ಹಿನ್ನಲೆಯಲ್ಲಿ ಇಂದು ಶಾಸಕ ಪ್ರಿಯಾಂಕ್ ಖರ್ಗೆ ಸಿಐಡಿ ಕಚೇರಿಗೆ ಪಿಎಸ್ಐ ನೇಮಕಾತಿ ಅಕ್ರಮ ಕುರಿತಂತೆ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

About The Author