ಇನ್ಮುಂದೆ ರಾಜ್ಯಾಧ್ಯಂತ ಮಾಸ್ಕ್ ಕಡ್ಡಾಯ – ಸಿಎಂ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ದೇಶದಲ್ಲಿ ಕೊರೋನಾ 4ನೇ ಅಲೆಯ ಸೂಚನೆಯನ್ನು ತಜ್ಞರು ನೀಡಿದ್ದಾರೆ. ಈ ಹಿನ್ನಲೆಯಲ್ಲಿಯೇ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ನಿಯಂತ್ರಣ ಸಭೆ ನಡೆಯಿದು. ಈ ಸಭೆಯಲ್ಲಿ ರಾಜ್ಯಾದ್ಯಂಕ ಮತ್ತೆ ಮಾಸ್ಕ್ ಕಡ್ಡಾಯ ನಿಯಮ ಜಾರಿಗೊಳಿಸೋ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಕೋವಿಡ್ ಕಂಟ್ರೋಲ್ ಸಭೆ ನಡೆಯಿತು. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್ ಅಶೋಕ್ ಸೇರಿದಂತೆ ವಿವಿಧ ಸಚಿವರು ಭಾಗಿಯಾಗಿದ್ದರು.

ಇವರಲ್ಲದೇ ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕೋವಿಡ್ ನಿಯಂತ್ರಣ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹಾಜರಿದ್ದರು. ಈ ಸಭೆಯಲ್ಲಿ ಕೋವಿಡ್ 4ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಸಲಾಯಿತು.

ಸದ್ಯ ಕೋವಿಡ್ ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ ಹೆಚ್ಚು ಇಲ್ಲದೇ ಇದ್ದರೂ, ಮುಂಬರುವ ದಿನಗಳಲ್ಲಿ ನಿಯಂತ್ರಣ ಕ್ರಮದ ಬಗ್ಗೆ ಚರ್ಚಿಸಲಾಯಿತು. ಜನರು ಮಾಸ್ಕ್ ಧರಿಸೋದು ಬಿಟ್ಟಿದ್ದಾರೆ. ಇದರಿಂದಲೂ ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿವೆ ಎಂಬ ನಿರ್ಧಾರಕ್ಕೆ ಬಂದ ಸಭೆಯಲ್ಲಿ, ಇನ್ಮುಂದೆ ರಾಜ್ಯಾಧ್ಯಂತ ಮಾಸ್ಕ್ ಕಡ್ಡಾಯ ಗೊಳಿಸೋ ತೀರ್ಮಾನವನ್ನು ಕೈಗೊಳ್ಳಲಾಗಿದೆ.

About The Author