ಬೆಂಗಳೂರು: ರಾಜ್ಯದಲ್ಲಿ ನಿಯಂತ್ರಣ ಮೀರಿ ಕೊರೋನಾ ಪರಿಸ್ಥಿತಿ ಇಲ್ಲ. ಬೆಂಗಳೂರಿನಲ್ಲಿ ಹೊರತು ಪಡಿಸಿ, ರಾಜ್ಯದಲ್ಲಿ ಕೋವಿಡ್ ಹೆಚ್ಚಳವೇನು ಇಲ್ಲ. ಹೀಗಾಗಿ ಕೋವಿಡ್ ನಿಯಂತ್ರಣಕ್ಕಾಗಿ 3ಟಿ ಸೂತ್ರವನ್ನು ಅಳವಡಿಸಿಕೊಳ್ಳಲಾಗುತ್ತದೆ. ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್ಮೆಂಟ್ ಬಗ್ಗೆ ಗಮನ ಗರಿಸಲಾಗುತ್ತದೆ. ಅದರ ಹೊರತಾಗಿ ಅನಗತ್ಯವಾಗಿ ಟಫ್ ರೂಲ್ಸ್ ಜಾರಿಗೊಳಿಸೋ ಯಾವುದೇ ನಿರ್ಧಾರವಿಲ್ಲ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇಂದು ಪ್ರಧಾನಿ ನರೇಂದ್ರ ಮೋದಿಯವರು ನಡೆಸಿದಂತ ವೀಡಿಯೋ ಕಾನ್ಫೆರೆನ್ಸ್ ನಲ್ಲಿ ಕೋವಿಡ್ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. 3ಟಿ ಸೂತ್ರವನ್ನು ಪಾಲಿಸಿ, ಟೆಸ್ಟಿಂಗ್, ಟ್ರೇಸಿಂಗ್, ಟ್ರಿಟ್ಮೆಂಟ್ ಬಗ್ಗೆ ಗಮನ ಹರಿಸುವಂತೆ ಸಲಹೆ ಮಾಡಿದ್ದಾರೆ ಎಂದರು.
ಕೋವಿಡ್ ನಿಯಂತ್ರ ಸಂಬಂಧ ಅನಗತ್ಯವಾಗಿ ಯಾವುದೇ ಕ್ರಮ ಕೈಗೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ. ಕೊರೋನಾ ಹೆಚ್ಚಳವಿರೋ ವ್ಯಾಪ್ತಿಯಲ್ಲಿ ಮಾತ್ರವೇ ಕ್ರಮ ಕೈಗೊಳ್ಳೋ ಸೂಚನೆ ನೀಡಿದ್ದಾರೆ. ಆರ್ಥಿಕ ಪ್ರಗತಿಯ ನಿಟ್ಟಿನಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಹಿಡುವಂತೆ ಸಲಹೆ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸಲಿದೆ ಎಂದರು.
ಕೊರೋನಾ 4ನೇ ಅಲೆ ತಡೆಗಾಗಿ ಟೆಸ್ಟಿಂಗ್ ಹೆಚ್ಚಳ ಮಾಡಲಾಗುತ್ತಿದೆ. ಪ್ರತಿನಿತ್ಯ ಇನ್ಮುಂದೆ 30 ಸಾವಿರ ಕೊರೋನಾ ಪರೀಕ್ಷೆ ನಡೆಸಲಾಗುತ್ತದೆ. ಬೆಂಗಳೂರಿನಲ್ಲಿ 10 ಸಾವಿರ ನಡೆಸಿದ್ರೇ, ರಾಜ್ಯಾಧ್ಯಂತ 20 ಸಾವಿರ ಟೆಸ್ಟಿಂಗ್ ಗುರಿ ಹೊಂದಲಾಗಿದೆ ಎಂದು ಹೇಳಿದರು.




