ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದಂತ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಈ ಸಂಬಂಧ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ಹಿತೇಂದ್ರ ಅವರನ್ನು ನೇಮಕ ಮಾಡಿದೆ. ಅಮೃತ್ ಪೌಲ್ ಅವರನ್ನು ಆಂತರೀಕ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಿದೆ.
ಅಂದಹಾಗೇ ನೇಮತಾಕಿ ಎಡಿಜಿಪಿ ಅಮೃತ್ ಪೌಲ್ ಸಂದರ್ಭದಲ್ಲಿಯೇ ಪೊಲೀಸ್ ಇನ್ಸ್ ಪೆಕ್ಟರ್ ನೇಮಕಾತಿ ಅಕ್ರಮ ಹೊರಬಂದಿತ್ತು. ಈಗ ಆ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ಈ ವೇಳೆಯಲ್ಲಿಯೇ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಎತ್ತಂಗಡಿ ಮಾಡಿದೆ.





