ಕಲಬುರ್ಗಿ: ರಾಜ್ಯ ಸರ್ಕಾರದಿಂದ ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಸಿಐಡಿ ತನಿಖೆಗೆ ನೀಡಿತ್ತು. ತನಿಖೆ ನಡೆಸುತ್ತಿರೋ ಸಿಐಡಿ ಅಧಿಕಾರಿಗಳು ಕ್ವೀನ್ ಪಿನ್ ದಿವ್ಯಾ ಹಾಗರಗಿಯನ್ನು ಬಂಧಿಸಿತ್ತು. ಬಂಧಿತ ಆರೋಪಿಯನ್ನು ತಮ್ಮ ವಶಕ್ಕೆ ಪಡೆದಿದು ಹೆಚ್ಚಿನ ವಿಚಾರಣೆ ನಡೆಸುತ್ತಿದೆ. ಸಿಐಡಿ ತನಿಖೆಯ ವೇಳೆಯಲ್ಲಿ ಕಾಂಗ್ರೆಸ್ ಜೊತೆಗಿನ ಸಂಬಂಧದ ಬಗ್ಗೆ ಸ್ಪೋಟಕ ಮಾಹಿತಿಯನ್ನು ದಿವ್ಯಾ ಹಾಗರಗಿ ಬಿಚ್ಚಿಟ್ಟಿದ್ದಾರೆ ಎನ್ನಲಾಗಿದೆ.
ಈಗಾಗಲೇ ದಿವ್ಯಾಗೆ ಆಶ್ರಯ ನೀಡಿದ್ದಂತ ಮಹಾರಾಷ್ಟ್ರ ಕಾಂಗ್ರೆಸ್ ಲೀಡರ್ ಸುರೇಶ ಕಾಂಟೇಗಾಂ ಕೂಡ ಬಂಧನವಾಗಿದೆ. ಅವರ ಸಹೋದರಿ ಮಹಾರಾಷ್ಟ್ರದ ಅಕ್ಕಲಕೋಟೆ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಇದಷ್ಟೇ ಅಲ್ಲದೇ ದಿವ್ಯಾ ಹಾಗರಗಿಗೆ ಮರಳು ಬ್ಲಾಕ್ ಟೆಂಡರ್ ಪಡೆಯಲು, ಸಹಾಯ ಮಾಡಿದ್ದೇ ಇದೇ ಕಾಂಗ್ರೆಸ್ ನಾಯಕ ಸುರೇಶ್ ಕಾಟೇಗಾಂವ ಎಂಬುದಾಗಿ ಸ್ಪೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.




