ರಾಜ್ಯ ಸರ್ಕಾರದಿಂದ ಪಿಎಸ್ಐ ಪರೀಕ್ಷೆ ರದ್ದು, ಮರು ಪರೀಕ್ಷೆಗೆ ಅಧಿಕೃತ ಆದೇಶ

ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಸಾಭೀತಾದ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ ಪರೀಕ್ಷೆ ರದ್ದು ಮಾಡಿದೆ. ಅಲ್ಲದೇ ಮರು ಪರೀಕ್ಷೆಗೆ ಅಧಿಕೃತ ಆದೇಶವನ್ನು ಹೊರಡಿಸಿದೆ.

ಈ ಕುರಿತು ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರವು, ಅ.3, 2021ರಂದು ರಾಜ್ಯಾಧ್ಯಂತ 545 ಪಿಎಸ್ಐ ನೇಮಕಾತಿಗಾಗಿ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ ಅಕ್ರಮ ಬಹಿರಂಗಗೊಂಡಿರುವ ಹಿನ್ನಲೆಯಲ್ಲಿ, ಪರೀಕ್ಷಾ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ ಎಂದು ಆದೇಶಿಸಿದೆ.

ಇನ್ನೂ ಪಿಐಎಸ್ ನೇಮಕಾತಿ ಪರೀಕ್ಷೆ ರದ್ದು ಮಾಡಲಾಗಿದ್ದು, ಮತ್ತೆ 545 ಪಿಎಸ್ಐ ನೇಮಕಾತಿಗಾಗಿ ಮರು ಪರೀಕ್ಷೆಯನ್ನು ನಡೆಸಲಾಗುತ್ತದೆ. ಹೊಸದಾಗಿ ಲಿಖಿತ ಪರೀಕ್ಷೆ ನಡೆಸುವ ಸಂಬಂಧ ಶೀಘ್ರವೇ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದೆ.

About The Author