ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಓಎಂಆರ್ ತಿದ್ದುಪಡಿ ಮಾಡಿದ ಹಿನ್ನಲೆಯಲ್ಲಿ, ಬೆಂಗಳೂರಿನಲ್ಲಿ 22 ಅಭ್ಯರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಸಿಐಡಿಯಿಂದ ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಆಯ್ಕೆ ಪಟ್ಟಿಯಲ್ಲಿದ್ದಂತ ಅಭ್ಯರ್ಥಿಗಳಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸಿತ್ತು. ಏಪ್ರಿಲ್ 20, 21 ಮತ್ತು 22ರಂದು 172 ಮಂದಿ ಅಭ್ಯರ್ಥಿಗಳ ಓಎಂಆರ್ ಕಾರ್ಬನ್ ಪ್ರತಿಯನ್ನು ಪರಿಶೀಲನೆ ನಡೆಸಿತ್ತು.
ವಿಚಾರಣೆಯ ವೇಳೆಯಲ್ಲಿ ಓಎಂಆರ್ ಪ್ರತಿಯಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ, ಎಫ್ಎಸ್ಎಲ್ ಲ್ಯಾಬ್ ಗೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಅಕ್ರಮ ನಡೆದಿರೋದು ಖಚಿತಗೊಂಡಿದೆ. ಈ ಹಿನ್ನಲೆಯಲ್ಲಿ 22 ಅಭ್ಯರ್ಥಿಗಳ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.




