Saturday, March 15, 2025

Latest Posts

‘ರಾಜಮಾರ್ತಾಂಡ’ ಚಿತ್ರಕ್ಕೆ ಆಕ್ಷನ್ ಪ್ರಿನ್ಸ್ ಡಬ್ಬಿಂಗ್.!

- Advertisement -

ನಟ ಚಿರಂಜೀವಿ ಸರ್ಜಾ ರವರು ನಮ್ಮನ್ನು ಅಗಲಿ ಸುಮಾರು 2 ವರ್ಷ ಆಗ್ತಾ ಬರ್ತಿದೆ. ಇವತ್ತಿಗೂ ಚಿರು ನಮ್ಮೊಂದಿಗೆ ಇಲ್ಲ ಅನ್ನೋ ಸತ್ಯವನ್ನು ಅಭಿಮಾನಿಗಳು ಮತ್ತು ಕುಟುಂಬದವರು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ ಅವರ ಕೊನೆಯ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ.

2009 ‘ವಾಯುಪುತ್ರ’ ಎಂಬ ಕನ್ನಡ ಚಲನಚಿತ್ರದ ಮೂಲಕ ನಾಯಕ ನಟನಾಗಿ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದರು. ಸಿನಿಮಾ ರಂಗಕ್ಕೆ ಎಂಟ್ರಿ ಕೊಡುವ ಮೊದಲು ಸುಮಾರು ೪ ವರ್ಷಗಳ ಕಾಲ ತಮ್ಮ ಸೋದರಮಾವ ಅರ್ಜುನ್ ಸರ್ಜಾರವರ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಚಿರು ರವರು ಹಲವು ವಿಭಿನ್ನ ಕತೆಯನ್ನುಳ್ಳ ಸಿನಿಮಾಗಳನ್ನ ನೀಡಿದ್ದು, ಅವರ ನಟನೆಯ ಕೊನೆಯ ಸಿನಿಮಾ ‘ರಾಜಮಾರ್ತಾಂಡ’ ಇದೀಗ ತೆರೆಗೆ ಬರುವುದಕ್ಕೆ ಸಜ್ಜಾಗಿದೆ. ಚಿರು ಬದುಕಿದ್ದಾಗಲೇ ಈ ಸಿನಿಮಾದ ಚಿತ್ರೀಕರಣ ಮುಗಿದಿತ್ತು. ಆದರೆ ಡಬ್ಬಿಂಗ್ ಮಾತ್ರ ಮುಗಿದಿರಲಿಲ್ಲ. ಹಾಗಾಗಿ ಟ್ರೇಲರ್‌ಗೆ ಈಗಾಗಲೇ ಚಿರು ತಮ್ಮ ಧ್ರುವ ಸರ್ಜಾ ಧ್ವನಿ ನೀಡಿದ್ದಾರೆ. ಇನ್ನು ಸದ್ಯದಲೇ ಧ್ರುವ, ಸಿನಿಮಾದ ಕಂಪ್ಲೀಟ್ ಡಬ್ಬಿಂಗ್ ಮಾಡಿಕೊಡಲಿದ್ದಾರೆ. ಇನ್ನು ಈ ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿಲ್ಲ. ಆದರೆ ಜೂನ್‌ನಲ್ಲಿ ಚಿತ್ರ ತೆರೆಯ ಮೇಲೆ ಬರಲು ಸಿದ್ಧವಾಗಿದೆ.

‘ಈ ಚಿತ್ರವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಬೇಕೆಂದುಕೊಂಡಿದ್ದೇವೆ. ಚಿರು ಅವರ 101 ಅಡಿ ಎತ್ತರದ ಕಟೌಟ್ ನಿಲ್ಲಿಸಲಿದ್ದೇವೆ ಹಾಗೂ ರಾಯನ್ ರಾಜ್ ಸರ್ಜಾ ಅವರ 51 ಅಡಿ ಎತ್ತರದ ಕಟೌಟ್ ಸಹ ನಿಲಿಸಲಿದ್ದೀವಿ. ನಮ್ಮ ‘ರಾಜಮಾರ್ತಾಂಡ’ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ’ ಎಂದು ನಿರ್ಮಾಪಕ ಶಿವಕುಮಾರ್ ಹೇಳಿದ್ದಾರೆ.

ಈ ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನ ಗೀತರಚನೆಕಾರರಾಗಿ ಜನಪ್ರಿಯರಾಗಿರುವ ಕೆ. ರಾಮ್‌ ನಾರಾಯಣ್ ಬರೆದು ನಿರ್ದೇಶಿಸಿದ್ದಾರೆ. ಇನ್ನು ಈ ಸಿನಿಮಾವನ್ನ ಪ್ರಣವ್ ಗೌಡ. ಎನ್, ನಿವೇದಿತಾ ಹಾಗೂ ಶಿವಕುಮಾರ್ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಹಾಗೂ ಧರ್ಮ ವಿಶ್ ಹಿನ್ನೆಲೆ ಸಂಗೀತ ನೀಡಿದ್ದು, ಕೆ. ಗಣೇಶ್ ಛಾಯಾಗ್ರಹಣ ಮಾಡಿದ್ದಾರೆ. ಇನ್ನು ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ‌ ಸಾಥಿ, ಮೇಘಶ್ರೀ, ರುಷಿಕಾ ರಾಜ್ ಅಭಿನಯಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರಾ, ಶಂಕರ್ ಅಶ್ವತ್ಥ್‌, ವಿನೀತ್ ಕುಮಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಜೊತೆಗೆ ಈ ಸಿನಿಮಾದಲ್ಲಿ ಚಿರಂಜೀವಿ ಪುತ್ರ ರಾಯನ್ ರಾಜ್ ಸರ್ಜಾ ಸಹ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ.

ಪ್ರಕೃತಿ ಪ್ರಭಾಕರ್, ಕರ್ನಾಟಕ ಟಿವಿ, ಸಿನಿಮಾ ಬ್ಯುರೋ

 

- Advertisement -

Latest Posts

Don't Miss