BREAKING NEWS: ರಾಜ್ಯ ಸರ್ಕಾರದಿಂದ 17 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೇರಿದಂತೆ ವಿವಿಧ ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿ 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರವು ನೋಟಿಫಿಕೇಷನ್ ಹೊರಡಿಸಿದ್ದು, ಬಿಬಿಎಂಪಿ ಮುಖ್ಯ ಆಯುಕ್ತರಾಗಿದ್ದಂತ ಗೌರವ್ ಗುಪ್ತ ಅವರನ್ನು ವರ್ಗಾವಣೆ ಮಾಡಿ, ಅವರನ್ನು ಇನ್ಫಾಸ್ಟ್ರಕ್ಟರ್ ಡೆವಲಪ್ಮೆಂಟ್ ಡಿಫಾರ್ಟೆಮೆಂಟ್ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಕಂದಾಯ ಇಲಾಖೆಯ ಪ್ರಿನ್ಸಿಪಲ್ ಸೆಕ್ರೇಟರಿಯಾಗಿದ್ದಂತ ತುಷಾ ಗಿರಿನಾಥ್ ಅವರನ್ನು ಬಿಬಿಎಂಪಿಯ ಮುಖ್ಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಇನ್ನುಳಿದಂತ ಯಾವೆಲ್ಲಾ ಐಎಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ ಎನ್ನುನ ಬಗ್ಗೆ ಮುಂದಿದೆ ಪಟ್ಟಿ..

About The Author