ಬೆಂಗಳೂರು: ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದಂತ ಒಂದು ಗಂಟೆಯಲ್ಲೇ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಾದ್ರು. ಇವರಲ್ಲದೇ ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಜಿ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಕೂಡ ಬಿಜೆಪಿ ಸೇರ್ಪಡೆಯಾದ್ರು.
ಇಂದು ನಗರದ ನಡೆದಂತ ಸರಳ ಸಮಾರಂಭದಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿ ಪಕ್ಷದ ಧ್ವಜ, ಶಾಲು ಧರಿಸೋ ಮೂಲಕ ಸೇರ್ಪಡೆಯಾದ್ರು.
ಮಂಡ್ಯ ಹಾಗೂ ಕೋಲಾರದಲ್ಲಿ ಪಕ್ಷ ಬಲ ವರ್ಧನೆಗಾಗಿ ಮಾಸ್ಟರ್ ಪ್ಲಾನ್ ಅನ್ನು ಬಿಜೆಪಿ ನಡೆಸಲಾಗುತ್ತಿದೆ ಎನ್ನಲಾಗುತ್ತಿತ್ತು. ಈ ಸಂದರ್ಭದಲ್ಲಿಯೇ ಮಾಜಿ ಶಾಸಕ ಎನ್ ಡಿ ಜಯರಾಂ ಅವರ ಪುತ್ರ ಅಶೋಕ್ ಜಯರಾಂ, ಮಾಜಿ ಐಆರ್ ಎಸ್ ಅಧಿಕಾರಿ, ಜೆಡಿಎಸ್ ತೊರೆದಿದ್ದಂತ ಲಕ್ಷ್ಮೀ ಅಶ್ವಿನ್ ಗೌಡ ಕೂಡ ಬಿಜೆಪಿ ಸೇರ್ಪಡೆಗೊಂಡರು.




